ಬೆಂಗಳೂರು ಗ್ರಾಮಾಂತರ

ಮುತ್ತೂರಿನಲ್ಲಿ ಕೊಳವೆ ಬಾವಿ ಉದ್ಘಾಟನೆ

Published On :

ದೊಡ್ಡಬಳ್ಳಾಪುರ: ಇಲ್ಲಿನ ನಗರಸಭೆ ವ್ಯಾಪ್ತಿಯ ಮುತ್ತೂರು ಗ್ರಾಮದಲ್ಲಿ ನೂತನವಾಗಿ ಕೊರೆಯಲಾಗಿರುವ ಕೊಳವೆ ಬಾವಿಯನ್ನು ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಿದರು.
ಈ ಕೊಳವೆ ಬಾವಿಯ ಮೂಲಕ ದೊಡ್ಡಬಳ್ಳಾಪುರ ನಗರದ ಕೆಲ ಭಾಗಗಳಿಗೆ ಮತ್ತು ಮುತ್ತೂರು ಗ್ರಾಮಕ್ಕೆ ನೀರು ಒದಗಿಸುವ ಕೆಲಸಕ್ಕೂ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ 5 ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಸಮರೋಪಾದಿಯಲ್ಲಿ ಬೋರ್‌ವೆಲ್‌ಗಳನ್ನು ಕೊರೆಸುವ ಮೂಲಕ ತಕ್ಷಣಕ್ಕೆ ನೀರಿನ ಸಮಸ್ಯೆಯನ್ನು ಆದಷ್ಟೂ ತಗ್ಗಿಸಲು ಗಂಭೀರ ಪ್ರಯತ್ನ ಮಾಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕೂಡ ಕೊಳವೆಬಾವಿ ಕಾಮಗಾರಿಗಳು ನಡೆಯಲಿವೆ ಎಂದರು. ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರು ಮತ್ತು ದಿನಬಳಕೆ ನೀರಿಗೆ ಗಂಭೀರ ಸಮಸ್ಯೆ ಎದುರಾಗಿದ್ದು, ಬೇಸಿಗೆ ಕಳೆಯುವವರೆಗೆ ನೀರಿನ ಸರಬರಾಜು ದೊಡ್ಡ ಸವಾಲಿನ ಕೆಲಸವಾಗಿದೆ ಎಂದರು.
ಕಾಂಗ್ರೆಸ್ ತಾಲೂಕು ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ನಗರ ಅಧ್ಯಕ್ಷ ತಿ.ರಂಗರಾಜು ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.

ಹೊಸಕೋಟೆ ಪಟ್ಟಣದಲ್ಲಿ ವಿಜೃಂಭಣೆ ಕರಗ ಮಹೋತ್ಸವ
ಹೊಸಕೋಟೆ: ಪಟ್ಟಣದಲ್ಲಿರುವ ಧರ್ಮರಾಯಸ್ವಾಮಿ ದ್ರೌಪದಮ್ಮ ದೇವಿಯ ಹೂವಿನ ಕರಗ ಮಹೋತ್ಸವ ಬಹಳ ವಿಜೃಂಭಣೆಯಿಂದ  ಜರಗಿತು. ರಾತ್ರಿ ಒಂದು ಗಂಟೆಯ ಸಮಯದಲ್ಲಿ ಧರ್ಮರಾಯಸ್ವಾಮಿ ದೇವಾಲಯದಿಂದ ಹೊರಗೆ ಹೂವಿನ ಕರಗ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮುಂಜಾನೆ 10 ಗಂಟೆಗೆ ದೇವಾಲಯಕ್ಕೆ ಬಂದು ಸೇರಿತ್ತು. ಎಲ್ಲಾ ಪ್ರಮುಖ ರಸ್ತೆಗಳಲ್ಲಿ ದೇವಿಯ ಹೂವಿನ ಕರಗ ನೊಡಲು ಭಕ್ತರು ಕಾತುರದಿಂದ ಕಾಯುತ್ತಿದ್ದರು.  ಇದೇ ಸಂದರ್ಭದಲ್ಲಿ ಸತತ ನಾಲ್ಕನೇ ಬಾರಿ ಕರಗ ಹೊತ್ತ ಶೇಖರ್ ಅವರು ಎಲ್ಲಾ ಭಕ್ತಾದಿಗಳ ಪ್ರಶಂಸೆಗೆ  ಪಾತ್ರರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.