ಇಂದು ಕೃಷಿ ಸಾಲ ಮೇಳ
ರಾಮನಗರ: ರಾಮನಗರದ ಕಾರ್ಪೋರೇಷನ್ ಬ್ಯಾಂಕ್ನಿಂದ ಮೇ 28ರ(ನಾಳೆ) ಬೆಳಗ್ಗೆ 9.30ಕ್ಕೆ ನಗರದ ಭಾರತೀಯ ವಿದ್ಯಾಪೀಠ ಶಾಲೆಯ ಆವರಣದಲ್ಲಿ ಕೃಷಿ ಸಾಲ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ಕಾರ್ಪೋರೇಷನ್ ಬ್ಯಾಂಕಿನ ಬೆಂಗಳೂರು ಕೇಂದ್ರ ಕಚೇರಿಯ ಪ್ರಧಾನ ವ್ಯವಸ್ಥಾಪಕ ಕೆ.ರಾಮಮೂರ್ತಿ, ಬೆಂಗಳೂರು ಪ್ರಾಂತೀಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ನಾರಾಯಣನ್, ನಬಾರ್ಡ್ ಬ್ಯಾಂಕ್ ವ್ಯವಸ್ಥಾಪಕ ವಸಂತಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಣ್ಣಯ್ಯ, ತೋಟಗಾರಿಕೆ ಉಪನಿರ್ದೇಶಕ ಡಾ.ಬಿ.ಕೃಷ್ಣ ಭಾಗವಹಿಸುವರು. ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಲ ಮೇಳದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬ್ಯಾಂಕ್ನ ಹಿರಿಯ ಶಾಖಾ ವ್ಯವಸ್ಥಾಪಕ ಕೋರಿದ್ದಾರೆ.
ಅಂಗವಿಕಲರಿಂದ ಅರ್ಜಿ ಆಹ್ವಾನ
ರಾಮನಗರ: ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಂಗವಿಕಲ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾ ಪೀಠವು ಅಂಗವಿಕಲರ ಪಾಲಿಟೆಕ್ನಿಕ್ ಸಂಸ್ಥೆಯನ್ನು ಸ್ಥಾಪನೆ ಮಾಡಿದೆ. 2013-14ನೇ ಸಾಲಿನ ಪ್ರವೇಶಕ್ಕೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಂಗವಿಕಲ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ 0821-2548315 ಸಂಪರ್ಕಿಸಬಹುದು.
ನಕ್ಸಲೀಯರ ಕ್ರಮಕ್ಕೆ ಖಂಡನೆ
ರಾಮನಗರ: ಛತ್ತೀಸ್ಘಡದ ಬಸ್ತರ್ ಜಿಲ್ಲೆಯಲ್ಲಿ ನೆಲ ಬಾಂಬ್ ಸಿಡಿಸಿ, ಗುಂಡಿನ ಮಳೆಗರೆದು 30ಕ್ಕೂ ಹೆಚ್ಚು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ನಕ್ಸಲೀಯರ ಕ್ರಮವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಮನಗರ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ. ನಕ್ಸಲೀಯರು ರಾಷ್ಟ್ರದ ಆಂತರಿಕ ಭದ್ರತೆಗೆ ಸವಾಲಾಗಿದ್ದಾರೆ. ಇವರನ್ನು ಮಟ್ಟ ಹಾಕಲು ಸಲ್ವಾಜುಡುಂ ಸಂಘಟನೆ ಸ್ಥಾಪಿಸಿದ್ದ ಮಹೇಂದ್ರ ಕರ್ಮಾ ಸೇರಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಮುಂಡರನ್ನು ಶನಿವಾರ ನಕ್ಸಲೀಯರು ಹತ್ಯೆ ಮಾಡಿದ್ದರು. ಈ ದುರ್ಘಟನೆಯು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಭಾರತೀಯರಾದ ನಾವೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ನಕ್ಸಲೀಯರು ಅಮಾಯಕ ನಾಗರಿಕರೂ ಸೇರಿದಂತೆ ಪೊಲೀಸ್, ಮಿಲಿಟರಿ ಅಧಿಕಾರಿಗಳನ್ನು ಮೇಲಿಂದ ಮೇಲೆ ಬಲಿ ತೆಗೆದುಕೊಳ್ಳುತ್ತಲೇ ಇದ್ದಾರೆ. ಇಂತಹ ಹೀನ ಕೃತ್ಯ ಎಸಗುವವರನ್ನು ದೇಶದೊಳಗಿನವರೇ ಬೆಂಬಲಿಸಿ, ಎಲ್ಲಾ ರೀತಿಯಿಂದ ಆಶ್ರಯ ನೀಡುತ್ತಿರುವುದು ಖಂಡನೀಯ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಈ ಅಮಾನುಷ ಅಟ್ಟಹಾಸದಿಂದ ಮೆರೆಯುತ್ತಿರುವ ನಕ್ಸಲೀಯರನ್ನು ಮೆಟ್ಟಿ ನಿಲ್ಲಲು ಇನ್ನು ಮುಂದೆ ಯಾವುದೇ ಮಾತುಕತೆಗೆ ಆಹ್ವಾನಿಸದೆ, ಉಕ್ಕಿನ ಕೈಗಳಿಂದ ಹೊಸಕಿ ಹಾಕಬೇಕೆಂದು ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸುನಿಲ್ ಕುಮಾರ್ ಹಾಗೂ ಕಾರ್ಯಕಾರಿಣಿ ಸದಸ್ಯ ಅನಿಲ್ ಬಾಬು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

