ಬೆಂಗಳೂರು ಗ್ರಾಮಾಂತರ

ಕಲಾವಂತಿಕೆಯ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ: ರಾಮಕೃಷ್ಣ

Published On :

ದೊಡ್ಡಬಳ್ಳಾಪುರ: ಸಾಂಸ್ಕೃತಿಕ ಕಲಾವಂತಿಕೆಯ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯವಿದೆ. ಸಾಂಸ್ಕೃತಿಕ ಪ್ರತಿಭೆಗೆ ಇತ್ತೀಚಿನ ದಿನಗಳಲ್ಲಿ ಸಿಗುತ್ತಿರುವ ಪ್ರೋತ್ಸಾಹ ಗಣನೀಯವಾಗಿದ್ದು ಅದಕ್ಕೆ ಪೂರಕವಾಗಿ ರಂಗ ಮಂದಿರ ಮತ್ತು ಕಲಾ ವೇದಿಕೆಗಳು ನಿರ್ಮಾಣವಾಗಬೇಕು ಎಂದು ಹಿರಿಯ ಅಧ್ಯಾಪಕ ಬಿ.ಎಲ್.ರಾಮಕೃಷ್ಣ ಹೇಳಿದರು. ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ರಾತ್ರಿ ನಡೆದ ಶ್ರೀಇಡಗುಂಜಿ ಮಹಾಗಣಪತಿ ನೃತ್ಯ ಸಂಸ್ಥೆಯ 3ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೊಡ್ಡಬಳ್ಳಾಪುರದಂತಹ ಪ್ರದೇಶಗಳಲ್ಲಿ ಇಂದು ಈ ಬಗೆಯ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ನಿರ್ಮಾಣವಾಗಲೇಬೇಕಾದ ಅನಿವಾರ್ಯತೆ ಇದೆ. ಆಧುನಿಕತೆಯ ಭರಾಟೆಯಲ್ಲಿ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಿರುವ ನಾವು, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಉಳಿಸಿಕೊಳ್ಳಬೇಕಾದರೆ ನೃತ್ಯ-ಸಂಗೀತ ಅತಿಮುಖ್ಯ ಎಂದರು. ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್, ತಾ.ಕಸಾಪ ಅಧ್ಯಕ್ಷ ಕೆ.ಆರ್.ರವಿಕಿರಣ್ ಮಾತನಾಡಿದದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್.ಹನುಮಂತೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದ ರಾಜು ದಾತಾರ್, ಗೌರಿ ವಿಶ್ವನಾಥ್, ಡಿ.ಡಿ.ನಾಯಕ್ ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.