'ಸೂಲಿಬೆಲೆಯಲ್ಲಿ ಕುಡಿವ ನೀರು ಪರಿಹಾರಕ್ಕೆ ಪ್ರಥಮ ಆದ್ಯತೆ'
ಕ.ಪ್ರ. ವಾರ್ತೆ ಸೂಲಿಬೆಲೆ ಮೇ 27
ಸೂಲಿಬೆಲೆ ಪಟ್ಟಣದಲ್ಲಿ ಉದ್ಭವಿಸಿರುವ ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಶಾಸಕ ಎಂಟಿಬಿ ನಾಗರಾಜ್ ಪ್ರಥಮ ಆದ್ಯತೆ ನೀಡಿದ್ದು,ಇದರ ಅನುಷ್ಠಾನಕ್ಕಾಗಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಎಂದು ಸೂಲಿಬೆಲೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮರವೆ ಕೃಷ್ಣಪ್ಪ ಹೇಳಿದ್ದಾರೆ.
ಸೂಲಿಬೆಲೆ ಪಟ್ಟಣದಲ್ಲಿ ಸೋಮವಾರ ರಾತ್ರಿ 7 ಗಂಟೆ ವೇಳೆಯಲ್ಲಿ ಶಾಸಕ ಎಂಟಿಬಿ ನಾಗರಾಜ್ ಅವರ ಅನುದಾನದಲ್ಲಿ ಕೊಳವೆ ಬಾವಿ ಕೊರಿಯಿಸುವ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ಪಟ್ಟಣದಲ್ಲಿ ಕುಡಿಯುವ ನೀರು ಸಮಸ್ಯೆ ಬಿಗಡಾಯಿಸಿದ್ದು, ಇದರ ಪರಿಹಾರಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಶಾಸಕರಿಗೆ ಇಲ್ಲಿನ ಪರಿಸ್ಥಿತಿಯನ್ನು ಮನವರಿಕೆ ಮಾಡಲಾಗಿತ್ತು. ಪಟ್ಟಣದಲ್ಲಿ ಜನ ಸಂಖ್ಯೆ ಹೆಚ್ಚಿರುವ ಕಾರಣ ತಕ್ಷಣಕ್ಕೆ ಒಂದು ಅಥವಾ ಎರಡು ಕೊಳವೆ ಬಾವಿಗಳನ್ನು ಕೊರೆಯಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದರು.
ತಾಪಂ ಮಾಜಿ ಸದಸ್ಯ ಚನ್ನಪ್ಪ ಮಾತನಾಡಿ, ಜನಪರ ಕಾಳಜಿಯನ್ನು ಹೊಂದಿರುವ ಶಾಸಕ ಎಂಟಿಬಿ ನಾಗರಾಜ್ ಗೆಲವು ಕಂಡ ಅಲ್ಪ ಸಮಯದಲ್ಲಿಯೇ ನೀರು ಸೌಲಭ್ಯಕ್ಕೆ ಆದ್ಯತೆ ನೀಡಿರುವುದು ಅಭಿನಂದನಾರ್ಹವಾಗಿದೆ ಎಂದರು.
ಹಿರಿಯ ಮುಖಂಡರಾದ ಶಿವಣ್ಣ, ಮುನಿರಾಜ್ ಮಾತನಾಡಿ, ಸೂಲಿಬೆಲೆ ಪಟ್ಟಣ ಸಮಗ್ರ ಅಭಿವೃದ್ಧಿಗೆ ಶಾಸಕರು ಎಲ್ಲ ರೀತಿಯಲ್ಲಿ ಸಹಕರಿಸುವ ಭರವಸೆ ನೀಡಿದ್ದು, ಹಂತ ಹಂತವಾಗಿ ಪ್ರಗತಿಯನ್ನು ಕಾಣಲಿದೆ ಎಂದರು.
ಬೆಂಗಳೂರು ಗ್ರಾಮಾಂತರ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಖಲಂದರ್ ಖಾನ್, ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಾದ ರಾಘವೇಂದ್ರ, ಮೌಲಖಾನ್, ಶಿಫೀ, ಮೋದು ಅಮ್ಜಾದ್, ರಮೇಶ್, ಲಕ್ಷ್ಮಣ್, ಡಿ.ಮುನಿಯಪ್ಪ, ಮುನಿನಾರಾಯಣಪ್ಪ, ತರಕಾರಿ ಮುನಿಕದಿರಪ್ಪ ಸೇರಿದಂತೆ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

