ಬೆಂಗಳೂರು ಗ್ರಾಮಾಂತರ

ಉನ್ನತ ಮಟ್ಟದ ತನಿಖೆಗೆ ಆದೇಶ

Published On :

ದೊಡ್ಡಬಳ್ಳಾಪುರ ತಾಲೂಕಿನ ಘಾಟಿಸುಬ್ರಹ್ಮಣ್ಯದ ಬಳಿಯ ಎಸ್.ಆರ್.ವ್ಯಾಲಿ ರೆಸಾರ್ಟ್‌ನಲ್ಲಿ ನಡೆದಿರುವ ನಂಗಾನಾಚ್ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಐಜಿ ಅವರ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚನೆಯಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಎಸ್ಪಿ ಡಾ.ಪ್ರಕಾಶ್ ಹೇಳಿದರು.
ಇಲ್ಲಿನ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಪ್ರಕರಣ 2009ರಲ್ಲಿ ನಡೆದಿದೆ ಎನ್ನಲಾಗಿದ್ದು, 2010ರ ನವಂಬರ್ 9ನೇ ತಾರೀಖು ರೆಸಾರ್ಟ್ ಮಾಲೀಕರು ಮತ್ತು ಪ್ರಕರಣದ ಬಗ್ಗೆ ದೂರು ದಾಖಲಾಗಿದೆ. ಆದರೆ ಆಗ ಇದ್ದ ಡಿವೈಎಸ್ಪಿ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಈ ಬಗ್ಗೆ ಎಫ್‌ಐಆರ್ ಕೂಡ ದಾಖಲಿಸಿಲ್ಲ. ಈ ಬಗ್ಗೆ ಕೂಡ ತನಿಖೆ ನಡೆಸಲಾಗುವುದು. ಆಗ ಡಿವೈಎಸ್ಪಿ ಆಗಿದ್ದ ಚಂದ್ರಕಾಂತ್, ಸಿಪಿಐ ಸಿದ್ಧಲಿಂಗಪ್ಪ, ಗ್ರಾಮಾಂತರ ಠಾಣೆಯ ಎಸೈಗಳ ಹಸ್ತಕ್ಷೇಪದ ಬಗ್ಗೆಯೂ ತನಿಖೆಯಾಗಲಿದೆ ಎಂದು ಅವರು ವಿವರಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.