ಎಸ್.ಆರ್. ವ್ಯಾಲಿ ಮುಂದೆ ರೈತಶಕ್ತಿ ಪ್ರತಿಭಟನೆ
ದೊಡ್ಡಬಳ್ಳಾಪುರ: ಅಶ್ಲೀಲ ದಂಧೆ ನಡೆಸುತ್ತಿರುವ ಎಸ್.ಆರ್.ವ್ಯಾಲಿ ರೆಸಾರ್ಟ್ ಅನ್ನು ಕೂಡಲೇ ಲಾಕ್‌ಔಟ್ ಮಾಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಶಕ್ತಿ ಸಂಘಟನೆಯ ನೇತೃತ್ವದಲ್ಲಿ ರೆಸಾರ್ಟ್ ಮುಂದೆ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಲಾಯಿತು.
ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ರೆಸಾರ್ಟ್‌ನತ್ತ ಧಾವಿಸಿದ ಪ್ರತಿಭಟನಾಕಾರರು ದೊಡ್ಡಬಳ್ಳಾಪುರದ ಸುಸಂಸ್ಕೃತ ವಾತಾವರಣ ಕದಡಲು ಬಿಡುವುದಿಲ್ಲ. ಇಂತಹ ಮಾಂಸದಂಧೆಯ ಕೇಂದ್ರಗಳನ್ನು ಸರ್ಕಾರ ಕೂಡಲೇ ಮುಚ್ಚಬೇಕು. ತಪ್ಪಿದಲ್ಲಿ ವ್ಯಾಪಕ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತಶಕ್ತಿ ಅಧ್ಯಕ್ಷ ಹೊನ್ನಾಘಟ್ಟ ಮಹೇಶ್ ನೇತೃತ್ವ ವಹಿಸಿದ್ದರು. ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಶ್ರೀಧರ್ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.
ಹಿಂಜಾವೇ ಖಂಡನೆ: ಅಶ್ಲೀಲ ದಂಧೆಯ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ. ಸಂಪಗಿರಾಮಯ್ಯ ಎಂಬವರ ಒಡೆತನದ ಈ ರೆಸಾರ್ಟ್‌ಗೆ ರಾಜ್ಯಸಭಾ ಸದಸ್ಯೆಯೂ ಆಗಿರುವ ನಟಿಯೊಬ್ಬರ ಪಾಲುದಾರಿಕೆ ಇದೆ ಎನ್ನಲಾಗುತ್ತಿದೆ. ಇಲ್ಲಿ ಅಶ್ಲೀಲಚಿತ್ರಗಳನ್ನು ತೆಗೆಯುವ ದಂಧೆ ಸೇರಿದಂತೆ ಅನೇಕ ಅಕ್ರಮಗಳು ನಡೆದಿವೆ. ಪೊಲೀಸರ ತೆರೆಮರೆ ಸಹಕಾರದಿಂದಲೇ ಈ ಅಕ್ರಮಗಳು ನಡೆಯುತ್ತಿವೆ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಅಮರ್‌ಗೌಡ ಆರೋಪಿಸಿದ್ದಾರೆ.
ಈಗಲಾದರೂ ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳಿಗೆ ಕಾನೂನು ರೀತ್ಯ ಶಿಕ್ಷೆಯಾಗಬೇಕು. ಪೊಲೀಸ್ ತನಿಖೆ ಬಗ್ಗೆ ಸಂಘಟನೆಗಳು ಮತ್ತು ಸಾರ್ವಜನಿಕರಿಗೆ ಮುಕ್ತ ಮಾಹಿತಿ ನೀಡುವಂತಿರಬೇಕು. ತಪ್ಪಿತಸ್ಥರೆಂದು ಕಂಡುಬರುತ್ತಿರುವ ಕೆಲ ಪೊಲೀಸರ್ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟು ನ್ಯಾಯಯುತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

