ಬೆಂಗಳೂರು ಗ್ರಾಮಾಂತರ

ಆರ್‌ಟಿಇ ಅನುಷ್ಠಾನಕ್ಕೆ ಶಿಕ್ಷಕರಿಗೆ ತರಬೇತಿ ಅಗತ್ಯ; ಮಂಜುನಾಥ್

Published On :

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕಾಗಿ ಶಿಕ್ಷಕರಿಗೆ ತರಬೇತಿ ನೀಡಬೇಕು ಎಂದು ಶಿಕ್ಷಕರ ಸಂಘಟನೆಯ ಮುಖ್ಯಸ್ಥ ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಆರ್‌ಟಿಇ ಕುರಿತ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.  ಶಿಕ್ಷಕರಿಗೆ ಆರ್‌ಟಿಇ ಅಂಶಗಳ ಬಗ್ಗೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಕಾಯಿದೆಯನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಹೊರತುಪಡಿಸಿದರೆ ಶಿಕ್ಷಕರು ಕಾಯ್ದೆಯಲ್ಲಿ ಪ್ರಮುಖ ಸ್ಥಾನ ಹೊಂದಿದ್ದಾರೆ. ಆದರೆ ಸರ್ಕಾರಗಳು ಈ ಬಗ್ಗೆ ಗಮನ ನೀಡಿದಂತಿಲ್ಲ ಎಂದು ಅವರು ಹೇಳಿದರು. ಮಾವಳ್ಳಿ ಶಂಕರ್ ಮಾತನಾಡಿ, ಆರ್‌ಟಿಇ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಇರಬೇಕು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಯಿದೆ ಜಾರಿ ಬಳಿಕ ಅನುದಾನ ಬಿಡುಗಡೆ ಮಾಡುವಲ್ಲಿ ವಿಫಲವಾಗುತ್ತಿವೆ. ಇದರಿಂದ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಮೀಸಲು ವಿದ್ಯಾರ್ಥಿಗಳ ವಿರುದ್ಧ ಪಿತೂರಿ ನಡೆಯುತ್ತಿದೆ. ಅಂತಹ ವಿದ್ಯಾರ್ಥಿಗಳನ್ನು ಅಸ್ಪೃಷ್ಯರನ್ನಾಗಿ ಕಾಣಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇಂದಿಗೂ ರಾಜ್ಯದ ಸಾಕಷ್ಟು ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ ಹಾಗೂ ಆಟದ ಮೈದಾನಗಳಿಲ್ಲ. ಪ್ರತಿ ಶಿಕ್ಷರಿಗೊಂದು ಕೊಠಡಿ ನಿಯಮ ಜಾರಿಗೆ ಬಂದಿಲ್ಲ. 38 ಸಾವಿರ ಶಿಕ್ಷಕರ ಹುದ್ದೆ ಖಾಲಿಯಿದೆ. ಈ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ ಎಂದು ಡಿವೈಎಫ್‌ಐ ಬಿ.ರಾಜಶೇಖರ್‌ಮೂರ್ತಿ ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.