ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಕ.ಪ್ರ.ವಾರ್ತೆ ಕೃಷ್ಣರಾಜಪುರ: ಮೇ 28
ಶ್ರೀ ಲಕ್ಷ್ಮಿನಾರಾಯಣಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಪುರಾತನ ಪ್ರಸಿದ್ದ ಭೂನಿಳಾ ಸಮೇತ ಶ್ರೀ ಲಕ್ಷ್ಮಿನಾರಾಯಣಸ್ವಾಮಿ ದೇವಸ್ಥಾನವನ್ನು ರು. 25 ಕೋಟಿ ವೆಚ್ಚದಲ್ಲಿ ಪುನರ್ ಪ್ರತಿಷ್ಠಾಪನೆ ಮತ್ತು ಕುಂಬಾಭಿಷೇಕ ಮಹೋತ್ಸವವನ್ನು ಬೆಂಗಳೂರು ಪೂರ್ವತಾಲೂಕು ಮುನ್ನೇಕೊಳಲದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ಗುಂಡೂರಾವ್, ಕೃಷ್ಣಬೈರೇಗೌಡ, ಶಾಸಕರಾದ ಎಂಟಿಬಿ ನಾಗರಾಜ್, ಬೈರತಿ ಬಸವರಾಜ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂದ್ದರು.
ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಧಾರ್ಮಿಕ ಕೇಂದ್ರಗಳು ಕೇವಲ ಪೂಜಾ ಕೈಂಕರ್ಯಗಳಿಗೆ ಮಾತ್ರ ಸೀಮಿತವಾಗದಿರಲಿ ಎಂದು ಸಲಹೆ ನೀಡಿದರಲ್ಲದೆ ಸಾಮೂಹಿಕ ವಿವಾಹಗಳಂತಹ ಸಮಾಜಮುಖಿ ಕಾರ್ಯಗಳಿಗೆ ಕೈಜೋಡಿಸಲಿ ಎಂದರು. ಸ್ಥಳೀಯ ಪಾಲಿಕೆ ಸದಸ್ಯ ಉದಯ್ಕುಮಾರ್ ಮಾತನಾಡಿ, ಸ್ಥಳೀಯ ಮುಖಂಡ ಮಾಜಿ ಸಚಿವ ಅಶ್ವತ್ಥ ್ಥನಾರಾಯಣರೆಡ್ಡಿ ನೇತೃತ್ವದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಈ ದೇವಸ್ಥಾನವನ್ನು 1995ರಲ್ಲಿ ಪುನರ್ಪ್ರತಿಷ್ಠಾಪನೆ ಮಾಡುವ ಚಿಂತನೆ ನಡೆಸಿ ಸ್ಥಳೀಯರ ಸಹಕಾರದಿಂದ ಗುದ್ದಲಿಪೂಜೆ ನೆರವೇರಿಸಲಾಯಿತು, ನಂತರ ಅವರು ದೈವಾಧೀನರಾದ ಮೇಲೆ ಇದರ ಸಂಪೂರ್ಣ ಜವಾಬ್ದಾರಿಯನ್ನು ಸ್ಥಳೀಯರಾದ ನಾವು ಹೊತ್ತು ಅವರ ಯೋಜನೆಗೆ ಕಳಂಕ ಬರದಂತೆ ದೇವಾಲಯವನ್ನು ಪ್ರತಿಷ್ಠಾಪನೆ ಮಾಡಿದ್ದೇವೆಂದರು. ದುಷ್ಟ ಶಕ್ತಿ ನಿರ್ನಾಮ ಮಾಡಿ ಶಿಷ್ಟರನ್ನು ರಕ್ಷಿಸುವ ಕಾಯಕ ಮಾಡಲು ಇಂತಹ ಶಕ್ತಿ ದೇವಗಳು ಬೇಕಾಗಿದೆ, ಹಣದ ಅಮಲಿನಲ್ಲಿರುವ ಕೆಲ ದುಷ್ಟರು ಇದರಿಂದ ಪಾಠಕಲಿಯಬೇಕಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

