ಬೆಂಗಳೂರು ಗ್ರಾಮಾಂತರ

ಹೈವೇಯಲ್ಲಿ ಅಪಘಾತ: ತಂದೆ, ಮಗಳ ಸಾವು

Published On :

ಹೊಸಕೋಟೆ: ರಾಷ್ಟ್ರೀಯ ಹೆದ್ದಾರಿ ಅತ್ತಿವಟ್ಟ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಕಮ್ಮನಹಳ್ಳಿ ನಿವಾಸಿ ಪೊನ್ನುಸ್ವಾಮಿ (62) ಹಾಗೂ ಇವರ ಪುತ್ರಿ ಸ್ವರ್ಣ (20) ಮೃತಪಟ್ಟಿದ್ದಾರೆ.  ಪೊನ್ನುಸ್ವಾಮಿ ಬೆಸ್ಕಾಂನಲ್ಲಿ ಲೈನ್ಮೆನ್ ಅಗಿದ್ದು ನಿವೃತ್ತಿಗೊಂಡಿದ್ದ. ಮೇ 23ರಂದು ತನ್ನ ಇಬ್ಬರು ಪತ್ನಿಯರಾದ ಯೇಸುಮಣಿ, ಮಣಿಯಮ್ಮ, ಪುತ್ರಿಯರಾದ ಎಲಿಜಬೆತ್, ಪ್ರಿಯಾ, ಸ್ವರ್ಣರೊಂದಿಗೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿನ ಸಂಬಂಧಿಗಳ ಮನೆಗೆ ತೆರಳಿದ್ದರು. ಮಾರುತಿ ವ್ಯಾನಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಮುಂದೆ ಚಲ್ಲಿಸುತ್ತಿದ್ದ ಬೈಕ್ ಹಠಾತ್ತನೆ ನಿಲುಗಡೆಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತು. ಇದರಿಂದಾಗಿ ಸ್ವರ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೊನ್ನುಸ್ವಾಮಿ ಎಂವಿಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ವಾಹನದಲ್ಲಿದ್ದ ಇತರೆ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಗಡಿ ತಾಲೂಕಿನಲ್ಲಿ ಡೆಂಘೀ ಜ್ವರ
ಮಾಗಡಿ: ತಾಲೂಕಿನಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದೆ.  ಕುದೂರು ಹೋಬಳಿ  ಬಿಸ್ಕೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಿ.ಎಸ್.ಸುಹೇಲ್  ಅವರು ಡೆಂಘೀ ಜ್ವರದಿಂದ  ಬಳಲಿದ್ದು, ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.   ತಾಲೂಕಿನಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದರೂ ತಾಲೂಕಿನ ವೈದ್ಯಾಧಿಕಾರಿಗಳು ಯಾವುದೇ ಮುನ್ನಚ್ಚರಿಕೆ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತಾಲೂಕು ವೈದ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಚರ್ಚಿಸಿದ್ದೇನೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.