ಬೆಂಗಳೂರು ಗ್ರಾಮಾಂತರ

ಕ್ಷೇತ್ರದಲ್ಲಿ ಬದಲಾವಣೆ ತನ್ನಿ: ಶಾಸಕ ಬಾಲಕೃಷ್ಣ

Published On :

ಮಾಗಡಿ: ಅಧಿಕಾರಿಗಳೇ  ಇದು ಹೊಸ ಸರ್ಕಾರ, ಕಾನೂನು ಬದ್ಧವಾಗಿ ಕರ್ತವ್ಯ ನಿರ್ವಹಿಸಿ, ಆಡಳಿತದಲ್ಲಿ ಪಾರದರ್ಶಕತೆಯಿರಲಿ, ಜವಾಬ್ದಾರಿಯಿಂದ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಬೇಕು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ಅವರು ಮಾಗಡಿ ತಾಲೂಕು ಕಚೇರಿ ಸಭಾಂಗಣದಲ್ಲಿ  ತಾಲೂಕು ಮಟ್ಟದ ಅಧಿಕಾರಿಗಳ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸಲು ಅವಕಾಶ ನೀಡಬೇಡಿ. ಕಚೇರಿಗೆ ಸರಿಯಾದ ಸಮಯಕ್ಕೆ ಬರಬೇಕು. ಮಧ್ಯಾಹ್ನದ ನಂತರ ಸಾರ್ವಜನಿಕರ ಸಮಸ್ಯೆಗಳಿಗೆ  ಸ್ಪಂದಿಸಬೇಕು. ಪ್ರತಿ ತಿಂಗಳ ಮೊದಲ ಶನಿವಾರ ತಾಲೂಕು ಕಚೇರಿಯಲ್ಲಿ ಜನಸಂಪರ್ಕ ಸಭೆ ಇರುತ್ತದೆ ಎಂದರು.  ಇದೇ ವೇಳೆ ತಹಸೀಲ್ದಾರ್ ಡಾ. ಬಿ.ಆರ್. ಹರೀಶ್ ನಾಯಕ್ ಮಾತನಾಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಸಿಬ್ಬಂದಿಗಳ ನೇಮಕಾತಿ ಬಗ್ಗೆ ಶಾಸಕರಲ್ಲಿ ಮನವಿ ಮಾಡಿಕೊಂಡರು. ತಕ್ಷಣಕ್ಕೆ 15 ಗ್ರಾಮಲೆಕ್ಕಾಧಿಕಾರಿಗಳ ಕೊರತೆ ತುಂಬುವಂತೆ ಮನವಿ ಮಾಡಿದರು. ಅಗ್ನಿಶಾಮಕ ದಳ ಕಚೇರಿ ಬಳಿ ಕೊಳವೆ ಬಾವಿ ಕೊರೆಸುವಂತೆ ಶಾಸಕರಲ್ಲಿ ಅಧಿಕಾರಿಗಳು ಮನವಿ ಮಾಡಿಕೊಂಡರು.  
ತಾಲೂಕು ಪಂಚಾಯ್ತಿ ಇಓ ಕೆ.ಬಿ. ಅಕ್ಕೋಜಿ, ಜಿ.ಪಂ. ಎಇಇ ರವಿ ಎಸ್.ಸೂರನ್, ಬೆಸ್ಕಂ ಎಇಇ ಪ್ರಭಾಕರ್, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಜಶೇಖರ್, ಪಿಎಸ್‌ಐ ಧರ್ಮೇಗೌಡ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಸಿ. ಕೃಷ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.