ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟ ಗುತ್ತಿಗೆ ನೌಕರರ ಕಾಯಂಗೆ ಒತ್ತಾಯ

Published On :

ಕ.ಪ್ರ. ವಾರ್ತೆ ಟಿ ಆನೇಕಲ್ಲು ಟಿ  ಮೇ 30
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಗುತ್ತಿಗೆ ನೌಕರರನ್ನು ಕಾಯಂ ಮಾಡಬೇಕೆಂದು ಒತ್ತಾಯಿಸಿ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಕಳೆದ 20 ವರ್ಷಗಳಿಂದ 170ಕ್ಕೂ ಹೆಚ್ಚು ಕಾರ್ಮಿಕರು ಪ್ರಾಣದ ಹಂಗು ತೊರೆದು ಕ್ರೂರ ಮೃಗಗಳ ಪಾಲನೆ ಪೋಷಣೆಯಲ್ಲಿ ತೊಡಗಿದ್ದೇವೆ. ಆರೋಗ್ಯ ವಿಮೆ, ಅಪಘಾತ ವಿಮೆ ಸಹ ಇರುವುದಿಲ್ಲ. ಬರುವ ಅಲ್ಪ ವೇತನದಲ್ಲಿ ಮಕ್ಕಳ ವಿದ್ಯಾಭ್ಯಾಸ, ಸಂಸಾರ ನಿರ್ವಹಣೆ ತುಂಬಾ ದುಸ್ತರವಾಗಿದೆ ಎಂದು ಕಾರ್ಮಿಕರು ತಮ್ಮ ನೋವನ್ನು ತೋಡಿಕೊಂಡರು.
ಹಿಂದಿನ ಸರ್ಕಾರದ ಅರಣ್ಯ ಸಚಿವರು ಹಲವಾರು ಸಲ ಪಾರ್ಕಿಗೆ ಭೇಟಿ ನೀಡಿದಾಗ ಭರವಸೆ ನೀಡಿದರು. ಕಾಗದ ಹಾಗೂ ಕಡತಗಳಲ್ಲೇ ಉಳಿದ ಭರವಸೆಗಳು ತುತ್ತಿನ ಚೀಲವನ್ನು ತುಂಬುವುದಿಲ್ಲ. ಮೃಗಾಲಯ ಪ್ರಾಧಿಕಾರವೂ ತಮ್ಮ  ವ್ಯಾಪ್ತಿಗೆ ಬರುವ ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪಾರ್ಕಿಗೆ ವಾರ್ಷಿಕ ಕೋಟ್ಯಂತರ ರು.ಗಳ ಆದಾಯವಿದ್ದರೂ ಕಡಿಮೆ ವೇತನಕ್ಕೆ ದುಡಿಸಿಕೊಳ್ಳುವ ಪರಿಸ್ಥಿತಿ ತಪ್ಪಬೇಕೆಂದು ಆಗ್ರಹಿಸಿದ ಅವರು ನಮ್ಮ
ಬೇಡಿಕೆಗಳನ್ನು 1 ತಿಂಗಳ ಅವಧಿಯಲ್ಲಿ ಈಡೇರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಹಾಲಿ 15 ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಮೂಕ ಪ್ರಾಣಿಗಳಿಗೆ ತೊಂದರೆಯಾಗದಂತೆ ನಡೆದುಕೊಳ್ಳಲು ನೌಕರರ ಸಂಘ ತೀರ್ಮಾನಿಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.