ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ
ಕ.ಪ್ರ. ವಾರ್ತೆ ದೇವನಹಳ್ಳಿ ಮೇ 30
ದೇವನಹಳ್ಳಿ ಸೂಲಿಬೆಲೆ ರಸ್ತೆಯಲ್ಲಿರುವ ಮದರ್ ತೆರೆಸಾ ಸೇವಾ ಟ್ರಸ್ಟ್ ವತಿಯಿಂದ ನಡೆಸುತ್ತಿರುವ ಗ್ರಾಮೀಣ ಮಹಿಳೆಯರಿಗಾಗಿ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಅರ್ಹತಾ ಪತ್ರ ವಿತರಣಾ ಸಮಾರಂಭ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಪಿಳ್ಳಮುನಿಶಾಮಪ್ಪ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಇಂತಹ ಸಮಾಜ ಸೇವೆ ಮಾಡುತ್ತಿರುವ ಈ ಸೇವಾ ಸಂಸ್ಥೆಯ ಮುಖ್ಯಸ್ಥರು ಹಾಗೂ ಮಾಜಿ ಪುರಸಭಾಧ್ಯಕ್ಷ ಎಂ.ನಾರಾಯಣಸ್ವಾಮಿ ಅವರನ್ನು ಅಭಿನಂದಿಸಿ ಗ್ರಾಮೀಣ ಭಾಗದ ಬಡ ಮಹಿಳೆಯರು ಬದುಕಲು ಅವಕಾಶ ಮಾಡಿಕೊಡುತ್ತಿರುವ ಮದರ್ ತೆರೆಸಾ ಸಂಸ್ಥೆಯನ್ನು ಅಭಿನಂದಿಸಿ ತಾಲೂಕಿನಲ್ಲಿ ಸಣ್ಣ ಕೈಗಾರಿಕೆಗಳು ಆರಂಭಿಸಲು ತಮ್ಮ ಸಹಕಾರ ನೀಡುವುದಾಗಿ ತಿಳಿಸಿದರು.
ಮದರ್ ತೆರೇಸಾ ಸಂಸ್ಥೆಯ ಮುಖ್ಯಸ್ಥರಾದ ಎಂ.ನಾರಾಯಣಸ್ವಾಮಿ ಮಾತನಾಡಿ ಇದುವರೆವಿಗೂ ಸಾವಿರಾರು ಮಂದಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಮಾಡಲು ಅಗತ್ಯ ತರಬೇತಿ ನೀಡಲಾಗಿದೆ ಎಂದರಲ್ಲದೆ ತರಬೇತಿ ನಂತರ ತಮ್ಮ ವೃತ್ತಿ ಮುಂದುವರೆಸಲು ಅಗತ್ಯವಾದ ನಿವೇಶನ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲಸೌಲಭ್ಯ ದೊರಕುವಂತೆ ಶಾಸಕರು ಶ್ರಮವಹಿಸಬೇಕು ಎಂದರು. ಸಮಾರಂಭದಲ್ಲಿ ಜವಳಿ ಮತ್ತು ಕೈಮಗ್ಗ ನಿಗಮ ಅಧಿಕಾರಿಗಳಾದ ರಾಜಣ್ಣ ಹಾಗೂ ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷರಾದ ಬುಳ್ಳಹಳ್ಳಿ ರಾಜಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

