'ಖಾಸಗಿಗಿಂತ ಸರ್ಕಾರಿ ಶಾಲೆಯೇ ಉತ್ತಮ'
ಸೂಲಿಬೆಲೆ: ಖಾಸಗಿ ಶಾಲೆಗಳಿಗಿಂತ ಕನ್ನಡ ಸರ್ಕಾರಿ ಶಾಲೆಗಳು ಶೈಕ್ಷಣವಾಗಿ ಹೆಚ್ಚು ಪ್ರಗತಿ ಕಾಣುತ್ತಿದ್ದು,ಮಕ್ಕಳಿಗೆ ಗುಣಾತ್ಮಕವಾಗಿ ಉತ್ತಮ ಶಿಕ್ಷಣ ಸಿಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ವೈ ನಾಗರಾಜ್ ತಿಳಿಸಿದ್ದಾರೆ.
ಸೂಲಿಬೆಲೆ ಟೌನ್ ಸರ್ಕಾರಿ ಶಾಲೆ ಪ್ರಾರಂಭೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಪಂ ಅಧ್ಯಕ್ಷ ಕೆ.ನಾರಾಯಣಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಪ್ರಗತಿಗೆ ಅನುಗುಣವಾಗಿ ಎಲ್ಲ ರೀತಿಯ ಸಹಕಾರ ಗ್ರಾಪಂದಿಂದ ದೊರಕಿಸಿಕೊಡಲಾಗವುದು. ಮಕ್ಕಳು ಚನ್ನಾಗಿ ಓದಿ ದೇಶವನ್ನು ಮುನ್ನಡಿಸಬೇಕು ಎಂದರು.
ಗ್ರಾಪಂ ಸದಸ್ಯ ಶಿವಣ್ಣ, ಎಸ್.ಕೆ ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆ ಶಿಕ್ಷಕರು ಹೆಚ್ಚು ಶ್ರಮವಹಿಸಿ ದುಡಿಯಬೇಕು. ಈ ಶಾಲೆಯ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ಹಾಗೂ ಮಕ್ಕಳಿಗೆ ಶೂಗಳನ್ನು ಉಚಿತವಾಗಿ ಕೊಡಿಸುವ ಭರವಸೆ ನೀಡಿದರು. ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು. ಮುಖಂಡರಾದ ಮುನಿರಾಮಯ್ಯ,ಶ್ರೀನಿವಾಸ್, ಮುನಿಶಾಮಯ್ಯ, ಮುಖ್ಯ ಶಿಕ್ಷಕಿ ಓಂಕಾರಮ್ಮ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

