ಮೊದಲ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಸರ್ಕಾರಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಶುಕ್ರವಾರ ಆರಂಭಗೊಂಡವು. ಎಲ್ಲಾ ಶಾಲೆಗಳಲ್ಲಿ ತಳಿರು ತೋರಣ ಕಟ್ಟಿ, ಕಾರ್ಯಕ್ರಮ ಏರ್ಪಡಿಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸಡಗರದಿಂದ ಸ್ವಾಗತಿಸಲಾಯಿತು.
ಇಲ್ಲಿನ ಮುತ್ಯಾಲಮ್ಮಗುಡಿ ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ತಿಮ್ಮೇಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಈ ಬಾರಿ ಸಕಾಲಕ್ಕೆ ಎಲ್ಲ ತರಗತಿಗಳ ಪಠ್ಯ ಪುಸ್ತಕಗಳು ಮತ್ತು ಮಕ್ಕಳಿಗೆ ಅಗತ್ಯ ಸಮವಸ್ತ್ರಗಳನ್ನು ಶಿಕ್ಷಣ ಇಲಾಖೆ ಪೂರೈಸಿದೆ. ತಾಲೂಕಿನ ಎಲ್ಲ ಶಾಲೆಗಳಿಗೂ ಈಗಾಗಲೇ ಲಭ್ಯವಿರುವ ಪಠ್ಯಪುಸ್ತಕ ಮತ್ತು ಸಮವಸ್ತ್ರ ಒದಗಿಸಲಾಗಿದೆ. 6 ಮತ್ತು 9ನೇ ತರಗತಿಗಳ ಪಠ್ಯ ಬದಲಾವಣೆಯಾಗಿರುವ ಹಿನ್ನಲೆಯಲ್ಲಿ ಈ ಎರಡು ತರಗತಿಗಳ ಪಠ್ಯ ಪುಸ್ತಕಗಳು ಶೀಘ್ರವೇ ಶಾಲೆಗಳಿಗೆ ತಲುಪಿಸಲಾಗುವುದು ಎಂದರು.
ಶಿಕ್ಷಣ ಸಂಯೋಜಕ ಬೈಯಪ್ಪರೆಡ್ಡಿ ಮಾತನಾಡಿ, ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಎಲ್ಲ ರೀತಿಯ ಮಾರ್ಗಸೂಚಿ ಶಾಲೆಗಳಿಗೆ ರವಾನಿಸಲಾಗಿದೆ. ಮಕ್ಕಳಿಗೆ ಸಂತಸದಾಯಕ ಕಲಿಕೆಗೆ ಪೂರಕವಾದ ವಾತಾವರಣ ಶಾಲೆಗಳಲ್ಲಿ ನಿರ್ಮಿಸಬೇಕಿದೆ. ಸಮುದಾಯದ ಸಹಭಾಗಿತ್ವದಲ್ಲಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಫಲಿತಾಂಶ ನೀಡುವ ಕಡೆ ಗಮನ ಹರಿಸಬೇಕು ಎಂದರು.ದರ್ಗಾಜೋಗಿಹಳ್ಳಿ ಗ್ರಾಪಂ ಉಪಾಧ್ಯಕ್ಷ ಡಿ.ಎನ್.ತಿಮ್ಮರಾಜು ಮತ್ತಿತರರು ಮಾತನಾಡಿದರು. ಗ್ರಾಪಂ ಸದಸ್ಯೆ ಪಾರ್ವತಮ್ಮ, ಶಿಕ್ಷಣ ಇಲಾಖೆಯ ರಾಜಶೇಖರ್, ರಾಮಚಂದ್ರಯ್ಯ, ಮುಖ್ಯ ಶಿಕ್ಷಕ ವೆಂಕಟಾಚಲಮೂರ್ತಿ ಮತ್ತಿತರರು ಹಾಜರಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ವೆಂಕಟಾಚಲಮೂರ್ತಿ ಅವರನ್ನು ಅಭಿನಂದಿಸಲಾಯಿತು. ಇದೆ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

