ಅಪ್ಪಗೆರೆಯ ಸೇಂಟ್ ಆನ್ ಬಾಲಕಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಚನ್ನಪಟ್ಟಣ: ಭಾರತ್ ವಿಕಾಸ್ ಪರಿಷತ್ ಕಣ್ವ ಶಾಖೆಯು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ಏರ್ಪಡಿಸಿದ್ದ ಭಾರತ್ ಕೋ ಜಾನೋ ರಸಪ್ರಶ್ನೆ ಸ್ಪರ್ಧೆಯಲ್ಲಿ ಅಪ್ಪಗೆರೆಯ ಸೇಂಟ್ ಆನ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯರಾದ ಆರ್.ರೂಪ ಹಾಗೂ ಆರ್.ರಶ್ಮಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾಗಿದ್ದು, ಇದೇ ತಿಂಗಳು ಕೊಳ್ಳೆಗಾಲದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಅರುಳ್ಶೀಲಿ, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿನಿಯರು ಅಭಿನಂದಿಸಿದ್ದಾರೆ.
ನಾಳೆ ಸೂಲಿಬೆಲೆ ಗ್ರಾಪಂ ಪ್ರಗತಿ ವೀಕ್ಷಣೆಗೆ 30 ವಿದೇಶಿಯರ ಆಗಮನ
ಸೂಲಿಬೆಲೆ: ರಾಷ್ಟೀಯ ಉದ್ಯೋಗ ಖಾತರಿ ಹಾಗೂ ಕಸದಿಂದ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ಹಲವು ಪ್ರಗತಿಪರ ಕಾರ್ಯಗಳನ್ನು ವೀಕ್ಷಣೆ ಮಾಡಲು ನ.11 ರಂದು ಸೋಮವಾರ ಸೂಲಿಬೆಲೆ ಗ್ರಾಪಂಗೆ ನಾನಾ ದೇಶಗಳ 30 ಜನರ ತಂಡ ಆಗಮಿಸಲಿದೆ ಎಂದು ತಾಪಂ ಅಧಿಕಾರಿ ಎನ್.ನಾಗರಾಜಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಪಂಚಾಯತ್ ರಾಜ್ ಕಾಮಗಾರಿಗಳ ಅನುಷ್ಠಾನ ಮತ್ತು ಪ್ರಗತಿಯ ಸಮಾರಂಭದಲ್ಲಿ
ಸೂಲಿಬೆಲೆ ಗ್ರಾಪಂ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಧಿಸಿರುವ ಪ್ರಗತಿ ಹಾಗೂ ತ್ಯಾಜ್ಯ ವಿಲೇವಾರಿ, ಕಸದಿಂದ ಎರೆಹುಳಗೊಬ್ಬರ ತಯಾರಿಕೆ ಮಾಡುತ್ತಿರುವ ಬಗ್ಗೆ ರಾಜ್ಯದ 175 ತಾಲೂಕುಗಳು ಅಧಿಕಾರಿಗಳ ಮುಂದೆ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ಸೂಲಿಬೆಲೆ ಗ್ರಾಪಂ ಪ್ರಗತಿ ಅನಾವರಣಗೊಂಡಿತ್ತು. ಇದರ ಸ್ಫೂರ್ತಿಯನ್ನು ಪಡೆದ ಹೈದರಬಾದ್ನ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಕೇಂದ್ರದ ಅಧಿಕಾರಿಗಳ ಜೊತೆಗೆ ನಾನಾ ದೇಶಗಳ 30 ಜನ ವಿದೇಶಿ ಪ್ರತಿನಿಧಿಗಳು ಅಧ್ಯಯನಕ್ಕಾಗಿ ನ.11 ರಂದು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಕೆ.ನಾರಾಯಣಪ್ಪ, ತಾಪಂ ಸಹಾಯಕ ನಿರ್ದೇಶಕ ತಿಮ್ಮಪ್ಪ, ಪಿಡಿಒ ಸುಂದರ್, ಕಾರ್ಯದರ್ಶಿ ಮುನಿರಾಜ್, ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನ್ ರೆಡ್ಡಿ, ವೆಂಕಟೇಗೌಡ ಸೇರಿದಂತೆ ಸದಸ್ಯರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

