ಬೆಂಗಳೂರು ಗ್ರಾಮಾಂತರ

462 ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ಒತ್ತಾಯ

Published On :

ಕ.ಪ್ರ.ವಾರ್ತೆ   ಸೂಲಿಬೆಲೆ   ನ. 9
462 ಅಪರಾಧ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿ ಎಲ್ಲ ನೊಂದ ಕುಟುಂಬಗಳಿಗೆ ನ್ಯಾಯ ದೊರೆಕಿಸುವಂತೆ ಒತ್ತಾಯಿಸಿ ಸೂಲಿಬೆಲೆಯಲ್ಲಿ ಶನಿವಾರ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಸಂಘಟನೆಯ
ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ಮೆರವಣಿಗೆ ನಡೆಸಿದರು.
ಸೂಲಿಬೆಲೆಯ ಜನತಾ ಕಾಲೊನಿಯ ಮೂಲಕ ಹೊಸ ಬಸ್ ನಿಲ್ದಾಣದಿಂದ ಸಾಗಿ ದೇವನಹಳ್ಳಿ ಕ್ರಾಸ್‌ವರೆಗೂ ನೂರಾರು ವಿದ್ಯಾರ್ಥಿ ಮತ್ತು ಸಂಘಟನೆಯ ಪದಾಧಿಕಾರಿಗಳು ಮೆರವಣಿಗೆ ನಡೆಸಿದರು. ದೇವನಹಳ್ಳಿ ಕ್ರಾಸ್‌ನಿಂದ ಹಾದೂ ಹೋಗಿರುವ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ, ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಿಂದ ಹೆಣ್ಣು ಮಕ್ಕಳು, ವಿದ್ಯಾರ್ಥಿನಿಯರು ಧೈರ್ಯವಾಗಿ ಓಡಾಡುವದೇ ಕಷ್ಟವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿವೆ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಇಂಥ ಪ್ರಕರಣಗಳಲ್ಲಿ ಯಾವುದೇ ಪ್ರಭಾವಿ ವ್ಯಕ್ತಿಗಳಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಂಡ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಪ್ರಕರಣಗಳವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಎಸ್‌ಎಫ್‌ಐ ತಾಲೂಕು ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ಈ ಹೋರಾಟ ಯಾವುದೇ ವ್ಯಕ್ತಿ ಮತ್ತು ಧರ್ಮದ ವಿರುದ್ಧವಲ್ಲದೆ ಅನ್ಯಾಯದ ವಿರುದ್ಧವಾಗಿದೆ. ರಾಜಕಾರಣಿಗಳ ಬೆಂಬಲ, ಹಸ್ತಕ್ಷೇಪ, ಒತ್ತಡಗಳಿಂದಾಗಿ ರಾಜ್ಯದ ಬಹುತೇಕ ಪ್ರಕರಣಗಳಲ್ಲಿ ಪ್ರಾಮಾಣಿಕ ಮತ್ತು ಮುಕ್ತ ತನಿಖೆ ನಡೆಯದ ಪರಿಣಾಮ ಅಪರಾಧಿಗಳು ಮತ್ತೆ ಮತ್ತೆ ಅಪರಾಧಗಳನ್ನು ಎಸೆಗುತ್ತಾ ರಾಜಾರೋಷವಾಗಿ ಅಲೆದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪ್ರಕರಣಗಳನ್ನು ಸಿಬಿಐ ತನಿಖೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಡಿವೈಎಫ್‌ಐ ಅಧ್ಯಕ್ಷ ಕೇಶವ, ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಪುರುಷೋತ್ತಮ್, ವಕೀಲ ರವಿಕುಮಾರ್, ಮುಖಂಡರಾದ ವಾಸಿಂಖಾನ್, ನವೀನ್, ಮುನೇಂದ್ರ, ಸುರೇಶ್, ಶಶಿಕುಮಾರ್, ನಾಗೇಂದ್ರ ಸೇರಿಂದತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.