ದೊಡ್ಡಬಳ್ಳಾಪುರ: ಕನ್ನಡ ನಾಮಫಲಕ ಆಂದೋಲನ ನಾಳೆ
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡುವ ಹಿನ್ನೆಲೆಯಲ್ಲಿ ಕನ್ನಡ ನಾಮಫಲಕ ಆಂದೋಲನ ಹಮ್ಮಿಕೊಳ್ಳಲಾಗಿದೆ.
ನ.11ರ ಸೋಮವಾರ ಬೆಳಗ್ಗೆ 11 ಗಂಟೆಗೆ ಕೊಂಗಾಡಿಯಪ್ಪ ಕೇಂದ್ರ ಬಸ್ ನಿಲ್ದಾಣದ ಸಿದ್ಧಲಿಂಗಯ್ಯ ವೃತ್ತದಿಂದ ಜಾಗೃತಿ ಆಂದೋಲನ ನಡೆಯಲಿದ್ದು, ಆಂಗ್ಲ ಮತ್ತು ಇತರ ಭಾಷೆ ನಾಮಫಲಕಗಳನ್ನು ಕಿತ್ತು ತಾಲೂಕು ಕಚೇರಿ ಮುಂದೆ ತಂದು ಸುರಿಯುವ ಮೂಲಕ ಕನ್ನಡ ನಾಮಫಲಕಗಳನ್ನು ಹಾಕಲು ಆಗ್ರಹ ಮಾಡಲಾಗುವುದು. ಕನ್ನಡ ವಿರೋಧಿತನದ ವಿರುದ್ಧ ಆಂದೋಲನ ರೂಪಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
23ರವರೆಗೆ ಮೆಗಾ ಲೋಕ ಅದಾಲತ್ ಪ್ರಯೋಜನ ಪಡೆಯಲು ಕಕ್ಷಿದಾರರಿಗೆ ಅವಕಾಶ
ದೇವನಹಳ್ಳಿ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲ ನ್ಯಾಯಾಲಯಗಳಲ್ಲಿ ನ.23ರವರೆಗೆ ಮೆಗಾ ಲೋಕ ಅದಾಲತ್ ಹಮ್ಮಿಕೊಂಡಿದ್ದು ದೇಶದಲ್ಲಿ ಕನಿಷ್ಠ 5 ಲಕ್ಷ ಪ್ರಕರಣಗಳು ರಾಜಿಯಾಗಬೇಕೆಂದು ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ದೇವನಹಳ್ಳಿಯ ನ್ಯಾಯಾಲಯಗಳಲ್ಲಿಯೂ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪ್ರತಿ ದಿನ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಅವರು ಶುಕ್ರವಾರ ನ್ಯಾಯಾಲಯದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದೇವನಹಳ್ಳಿ ನ್ಯಾಯಾಲಯದಲ್ಲಿ 5700 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಸೇರಿ ಸುಮಾರು ಹತ್ತು ಸಾವಿರ ಪ್ರಕರಣಗಳು ಇದ್ದು ಕೆಲವು ಸಣ್ಣ ಪುಟ್ಟ (ಸಿಆರ್ಪಿಸಿ 320) ಕ್ರಿಮಿನಲ್ ಪ್ರಕರಣಗಳು ಲೋಕ ಅದಾಲತ್ ಮುಖಾಂತರ ರಾಜಿ ಸಂಧಾನ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ತಿಳಿಸಿದರು.
ಇದುವರೆಗೂ ಮೆಗಾ ಲೋಕ ಅದಾಲತ್ತಿನಲ್ಲಿ 536 ಪ್ರಕರಣಗಳು ರಾಜಿಯಾಗಿವೆ ಎಂದರು. ಇಂತಹ
ಅದಾಲತ್ ಮೂಲಕ ರಾಜಿಯಾದರೆ ಇಬ್ಬರು ಕಕ್ಷಿದಾರರಿಗೂ ಪ್ರೀತಿ ಬಾಂಧವ್ಯ ಹೆಚ್ಚಾಗುತ್ತದೆ. ಪರಸ್ಪರ ವಿಶ್ವಾಸ ಮೂಡುತ್ತದೆ. ಅಲ್ಲದೆ ಸೇಡಿನ ಮನೋಭಾವ ಕಡಿಮೆಯಾಗುತ್ತದೆ. ಅಲ್ಲದೆ ಎಲ್ಲಕ್ಕಿಂತ ಮುಖ್ಯವಾಗಿ ರಾಜಿಯಾದನಂತರ ಕಕ್ಷಿದಾರರು ಮತ್ತೆ ಅಪೀಲು ಹೋಗಲು ಅವಕಾಶವಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಯು.ಎಮ್. ಅಡಿಗ ಅವರು ಮಾತನಾಡಿ ಸಾರ್ವಜನಿಕರು, ವಕೀಲರು, ಹಾಗೂ ಪೊಲೀಸರು ಮೆಗಾ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಬೇಕೆಂದು ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಜೈಬುನ್ನಿಸ, ಅಪರ ಸಿವಿಲ್ ನ್ಯಾಯಾಧೀಶರಾದ ಅನಿತಾ ಹಾಗೂ ತಾಲೂಕು ದಂಡಾಧಿಕಾರಿಗಳಾದ ಡಾ.ವೆಂಕಟರಾಜು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

