ಬೇಂದ್ರೆ ಕೃತಿ ಸಾಕಷ್ಟು ವಿಚಾರ ಒಳಗೊಂಡಿದೆ
ವಿಜಯಪುರ: ದ.ರಾ.ಬೇಂದ್ರೆಯವರ ಕೃತಿಗಳು ಸಾಕಷ್ಟು ವಿಚಾರಗಳನ್ನು ಒಳಗೊಂಡಿದೆ ಎಂದು ಜಿಲ್ಲಾ ಕಸಾಪ ಉಪಾಧ್ಯಕ್ಷ ಹಾಗೂ ಶಿಕ್ಷಕ ರುದ್ರೇಶ್ ಮೂರ್ತಿ ತಿಳಿಸಿದರು.
ಅವರು ಪಟ್ಟಣ ಸಮೀಪದ ಹಾರೋಹಳ್ಳಿಯಲ್ಲಿ ಎನ್.ರಾಜ್‌ಗೋಪಾಲ್ ಅವರ ಮನೆಯಲ್ಲಿ ತಾಲೂಕು ಕಸಾಪ ವತಿಯಿಂದ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಮಾಸಾಚರಣೆ ಕಾರ್ಯಕ್ರಮದಲ್ಲಿ
ದ.ರಾ.ಬೇಂದ್ರೆಯವರ ಬಗ್ಗೆ ಉಪನ್ಯಾಸ ನೀಡಿದರು.
ತಾಲೂಕು ಕಸಾಪ ಅಧ್ಯಕ್ಷ ಎನ್.ರಾಜ್‌ಗೋಪಾಲ್ ಮಾತನಾಡಿ, ಕಸಾಪ ಸದಸ್ಯತ್ವವನ್ನು ತೆಗೆದುಕೊಳ್ಳುವುದರೊಂದಿಗೆ ಪ್ರತಿಯೊಂದು ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು. ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಚಿ.ಮಾ. ಸುಧಾಕರ್ ಮಾತನಾಡಿ, ನಾಡಿನ ರಾಜ್ಯೋತ್ಸವವನ್ನು ಆ
ಚರಿಸುವ ವೇಳೆಯಲ್ಲಿ ಹಿಂದಿನ ಪರಂಪರೆಗಳನ್ನು ಅರಿತುಕೊಂಡು ಆಚರಿಸಬೇಕು. ಕನ್ನಡಕ್ಕೆ ಅವಮಾನವಾಗದಂತೆ ಎಚ್ಚರವಹಿಸಬೇಕು ಎಂದರು.
ಹಾರೋಹಳ್ಳಿ ಗ್ರಾಮದ ಮುಖಂಡ ಎಚ್.ಎಸ್.ಮುನಿರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹೋಬಳಿ ಘಟಕದ ಕಸಾಪ ಅಧ್ಯಕ್ಷ ಭೈರೇಗೌಡ, ಟೌನ್ ಕಸಾಪ ಅಧ್ಯಕ್ಷ ಮುನಿವೀರಣ್ಣ, ತಾಲೂಕು ಕಸಾಪ ನಿಕಟ ಪೂರ್ವ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಹೆಚ್.ಚಂದ್ರಶೇಖರ್, ಪರಮೇಶ್, ಬಿರಾದರ್, ಮಹಾತ್ಮಾಂಜನೇಯ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

