ಮೆಗಾ ಪೀಸ್ಪೋಸ್ಟರ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರಕ್ಕೆ ಬಹುಮಾನ
ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಮಾರ್ಗದರ್ಶನದಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ-317ಎಫ್ ನೇತೃತ್ವದಲ್ಲಿ ಲಾಲ್ಬಾಗ್ನ ಮರಿಗೌಡ ಹಾಲ್ನಲ್ಲಿ ನಡೆದ ಮೆಗಾ ಪೀಸ್ಪೋಸ್ಟರ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಲಯನ್ಸ್ ಕ್ಲಬ್ ವತಿಯಿಂದ ಭಾಗವಹಿಸಿದ್ದ 5 ಮಂದಿ ವಿದ್ಯಾರ್ಥಿಗಳಲ್ಲಿ 3 ಮಂದಿ ಬಹುಮಾನಿತರಾದದ್ದು ವಿಶೇಷ. ಸ್ಪರ್ಧೆಯಲ್ಲಿ 1500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳ ಸ್ಪರ್ಧಿಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ವಿಶ್ವಶಾಂತಿಯ ಸಂದೇಶ ಸಾರುವ ವಿಚಾರಗಳನ್ನು ಪುಟಾಣಿಗಳು ತಮ್ಮ ಕುಂಚದಲ್ಲಿ ಬಿಡಿಸಿದ್ದರು.
ಚಿತ್ರನಟ ರಾಮಕೃಷ್ಣ, ಜಿಲ್ಲಾ ಡಿಜಿ ಪಿಎಂಜೆಎಫ್ ಆರ್.ಕುಮಾರ್ ಬಹುಮಾನಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದರು. ಲಯನ್ಸ್ ಪದಾಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

