ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ನಿಷ್ಠೆ ಇರಲಿ: ಶಿವಣ್ಣ
ಕ.ಪ್ರ.ವಾರ್ತೆ ಆನೇಕಲ್ಲು ನ. 9
ಸರ್ಕಾರಿ ನೌಕರ ಬಂಧುಗಳು ಸರ್ಕಾರದ ಜನಪರ ಯೋಜನೆಗಳ ಪೂರ್ಣ ಪ್ರಮಾಣದ ಅನುಷ್ಠಾನ ಮಾಡಲು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ತೊಡಗಿಸಿಕೊಳ್ಳಬೇಕೆಂದು ಶಾಸಕ ಬಿ. ಶಿವಣ್ಣ ಮನವಿ ಮಾಡಿದ್ದಾರೆ.
ಅವರು ಆನೇಕಲ್ಲಿನ ಅಂಚೆ ಕಚೇರಿ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನೂತನ ಕಾರ್ಯಕಾರಿ ಸಮಿತಿ ಏರ್ಪಡಿಸಿದ್ದ ಕಾರ್ಯಚಟುವಟಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲ ವರ್ಗಗಳ ಬಡ ಜನತೆಯ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಶಾಲಾ ಮಕ್ಕಳು, ಅವಲಂಬಿತ ಮಹಿಳೆಯರು, ಹಿರಿಯ ನಾಗರಿಕರಿಗೆ ನಿರ್ದಿಷ್ಟ ಯೋಜನೆಗಳಿವೆ. ಸಮಾನತೆಯ ಸಮಾಜಕ್ಕೆ ಪುಷ್ಠಿ ನೀಡಲು ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹರಿಗೆ ತಲುಪಿಸುವ ಜವಾಬ್ದಾರಿ ನೌಕರರ ಮೇಲಿದೆ. ಶ್ರದ್ಧೆ ಹಾಗೂ ಇಚ್ಛಾಶಕ್ತಿಯಿದ್ದಲ್ಲಿ ನಿಗದಿತ ಸಮಯದಲ್ಲಿ ನಿರ್ದಿಷ್ಠ ಗುರಿ ತಲುಪಲು ಸಾಧ್ಯ. ದಿಕ್ಕು ತಪ್ಪಿಸುವ ಹಾಗೂ ನಿಧಾನಗತಿ ಅನುಸರಿಸುವ ನೌಕರರ ಮೇಲೆ ಅನಿವಾರ್ಯ ಕ್ರಮ ವಹಿಸಬೇಕಾಗುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಬೇಕೆಂದು ಕೋರಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ನಾಗರಾಜ್ ಮಾತನಾಡಿ ಆರೋಗ್ಯ, ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳು ಆದ್ಯತೆ ಅನುಸಾರ ಎಲ್ಲ ಗ್ರಾಮಗಳಿಗೂ ತಲುಪುತ್ತಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಯೋಜನೆಗಳಿದ್ದು ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳು ತರಬೇತಿ ಮತ್ತು ಯೋಜನೆ ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದರು. ನೌಕರರ ಸಂಘದ ಅಧ್ಯಕ್ಷ ಗವಿರಂಗಯ್ಯ ಮಾತನಾಡಿ, ಹಿಂದಿನ ಸಮಿತಿಯ ಕೆಲ ತೀರ್ಮಾನಗಳು ನೌಕರರ ಅಭ್ಯುದಯವನ್ನು ಕಡೆಗಣಿಸಿದೆ. ಹೊಸ ಕಾರ್ಯಕಾರಿ ಸಮಿತಿಯ ಮುಂದೆ ಹಲವಾರು ಸವಾಲುಗಳಿದ್ದು ಹಂತ ಹಂತವಾಗಿ ಸುಧಾರಣೆ ತರಲಾಗುವುದು. ಮುಂದಿನ ದಿನಗಳಲ್ಲಿ ರಚನಾತ್ಮಕ ಆಲೋಚನೆ, ಕ್ರಿಯಾತ್ಮಕ ಚಟುವಟಿಕೆ ಮೂಲಕ ನೌಕರರ ಕಲ್ಯಾಣಕ್ಕಾಗಿ ಆದ್ಯತೆ ನೀಡಲಾಗುವುದು ಎಂದರು.
ಜಿಲ್ಲಾ ಪಂಚಾಯ್ತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ರಾಮಚಂದ್ರ, ಜಿಪಂ ಸದಸ್ಯ ನಾರಾಯಣಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ್, ನೌಕರರ ಸಂಘದ ಗೌರವಾಧ್ಯಕ್ಷ ಕೆ. ಶಿವಣ್ಣ, ಪುರಸಭಾ ಸದಸ್ಯರು, ಮುಖಂಡರಾದ ಜಿ. ಗೋಪಾಲ್, ನರೇಂದ್ರಕುಮಾರ್, ರವಿಚೇತನ್, ವಿವಿಧ ಇಲಾಖೆಯ ನೌಕರ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವೇದಿಕೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

