ಬೆಂಗಳೂರು ಗ್ರಾಮಾಂತರ

ಧಾರ್ಮಿಕ ಆಚರಣೆಯಿಂದ ಜೀವನದಲ್ಲಿ ಪರಿಪೂರ್ಣತೆ ಸಾಧ್ಯ: ಸಿದ್ಧಗಂಗಾ ಶ್ರೀ

Published On :

ಮಾಗಡಿ: ಧಾರ್ಮಿಕ ಆಚರಣೆಯಿಂದ ಮಾತ್ರ ಜೀವನದಲ್ಲಿ ಪರಿಪೂರ್ಣತೆ ಸಾಧ್ಯ ಎಂದು ಸಿದ್ದಗಂಗಾ ಮಠಾಧೀಶ  ಡಾ.ಶಿವಕುಮಾರ ಸ್ವಾಮೀಜಿ  ನುಡಿದರು.
ಅವರು ವೀರೇಗೌಡನದೊಡ್ಡಿಯಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನಂಬಿಕೆ ಅವರವರ ಇಷ್ಟ, ಭಾರತದ ಭಾವೈಕ್ಯ, ಸಂಸ್ಕೃತಿ ಮತ್ತು ಜನಪರ ಪರಂಪರೆಯನ್ನು ಮುಂದುವರೆಸಿಕೊಂಡು ಬರಲು ಯುವಕರು ನೀತಿಯುತ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀಗಳರು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್  ಮಾತನಾಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದರು.
 ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ ಯುವ ಸಮುದಾಯ ಡಾ.ಶಿವಕುಮಾರ ಸ್ವಾಮಿಜೀ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳವಂತೆ ಸಲಹೆ ನೀಡಿದರು. ವಿನಾಯಕ ಯುವಕರ ಬಳಗ, ಹಾಲು ಉತ್ಪಾದಕರ ಸಹಕಾರ ಸಂಘ, ಹಾಗೂ ವೀರಶೈವ ಸಮಾಜದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.