ನಾಡಿನ ಮಹಾಚೇತನ ನಿಮ್ಮ ಮಕ್ಕಳಿಗೆ ಸ್ಫೂರ್ತಿಯಾಗಲಿ
ದೇವನಹಳ್ಳಿ: ಇಲ್ಲಿನ ಯುವ ಜ್ಯೋತಿ ವಿದ್ಯಾರ್ಥಿ ಬಳಗದವರು ಕನ್ನಡ ರಾಜ್ಯೋತ್ಸವ ಅಂಗವಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಜನಿಸಿದ ಅದ್ಭುತ ಗಾಯಕರಾಗಿದ್ದ ಡಾ.ಸಿ. ಅಶ್ವತ್ಥ್ ಅವರ ಸ್ಮರಣಾರ್ಥ ಎರಡು ದಿನಗಳ ಸಾಂಸ್ಕೃತಿಕ ಹಬ್ಬದ ಸಮಾರಂಭವನ್ನು ಇಲ್ಲಿನ ಗುರುಭವನದಲ್ಲಿ ಆಯೋಜಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ದಂಡಾಧಿಕಾರಿ ಡಾ.ವೆಂಕಟರಾಜು ವಹಿಸಿ ಈ ಸಮಾರಂಭ ಆಯೋಜಿಸಿರುವ ಯುವ ಜ್ಯೋತಿ ವಿದ್ಯಾರ್ಥಿ ಸಂಘದವರು ನಮ್ಮ ನಾಡಿನ ನಾಡು ನುಡಿ ಅಲ್ಲದೆ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯ ಮಾಡಿಕೊಟ್ಟಿದ್ದಲ್ಲದೆ, ಈ ಸಂಘಟನೆಯಲ್ಲಿ ಉತ್ತಮ ಗಾಯಕರಿರುವುದು ಸಂತೋಷದ ವಿಷಯ. ಮುಂಬರುವ ರಾಷ್ಟ್ರೀಯ ಹಬ್ಬಗಳ ಸಮಾರಂಭ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ತಿಳಿಸಿದರಲ್ಲದೆ ತಾವು ಕನ್ನಡದಲ್ಲಿ ಎಂ.ಎ ಮಾಡಿ ಐದು ಚಿನ್ನದ ಪದಕಗಳನ್ನು ಗಳಿಸಿ ಕೆಎಎಸ್ನಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದರಿಂದ ತಹಸೀಲ್ದಾರ್ ಆಗಲು ಸಾಧ್ಯವಾಯಿತು. ನಾನು ಚಿಕ್ಕವನಾಗಿದ್ದಾಗ ನನ್ನ ತಾಯಿಯ ಪ್ರತಿನಿತ್ಯ ಕೆಲಸಗಳಲ್ಲಿ ಜಾನಪದ ಹಾಡು ಹಾಡುತ್ತಿದ್ದುದು ನೆನಪಿಗೆ ಬರುತ್ತಿದೆ ಎಂದರು. ಈ ತಾಲೂಕಿನಲ್ಲಿ ಅನೇಕ ಸಾಹಿತಿಗಳು ಬರಹಗಾರರು ಗಾಯಕರು ಅಲ್ಲದೆ ಮೈಸೂರು ಹುಲಿ ಟಿಪ್ಪೂ ಸುಲ್ತಾನರಂಥ ಹೋರಾಟಗಾರರು ಹುಟ್ಟಿದ್ದು ಅವರು ಯುವಕರಿಗೆ ಮತ್ತು ಮಕ್ಕಳಿಗೆ ಸ್ಫೂರ್ತಿಯಾಗಲಿ. ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

