ಬೆಂಗಳೂರು ಗ್ರಾಮಾಂತರ

ಸುಮೋಗೆ ಕಾರು ಡಿಕ್ಕಿ; ವ್ಯಕ್ತಿ ಸಾವು, ಇಬ್ಬರಿಗೆ ಗಾಯ

Published On :

ಬೆಂಗಳೂರು: ಸಾಫ್ಟ್‌ವೇರ್ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಸುಮೋ ಮತ್ತು ಕಾರೊಂದರ ನಡುವೆ ಸೋಮವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎಂ.ಜಿ. ರಸ್ತೆಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಸುಮೋದಲ್ಲಿದ್ದ ಭದ್ರತಾ ಸಿಬ್ಬಂದಿ ಅಶ್ವತ್ಥನಾರಾಯಣ (30) ಸ್ಥಳದಲ್ಲೇ ಮೃತಪಟ್ಟರೆ, ಸಾಫ್ಟ್‌ವೇರ್ ಉದ್ಯೋಗಿಗಳಾದ ಸುಂದರ್‌ಜಿತ್ ಮತ್ತು ಸಿ. ಶಿವಕುಮಾರ್ ಗಾಯಗೊಂಡಿದ್ದಾರೆ. ಸುಮೋ ಚಾಲಕ ವಾಹನವನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಶೋಕನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ದರೋಡೆ ಸಂಚು; ನಾಲ್ವರ ಬಂಧನ
ಬೆಂಗಳೂರು: ಕೊಲೆಗೈದು ನಗನಾಣ್ಯ ದೋಚಲು ಹೊಂಚು ಹಾಕುತ್ತಿದ್ದ ರೌಡಿ ಸೈಲೆಂಟ್ ಸುನೀಲನ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ಒಂದು ಕಾರು ಹಾಗೂ ಮಾರಕಾಯುಧಗಳನ್ನು  ವಶಪಡಿಸಿಕೊಳಲಾಗಿದೆ. ಕೊಡಿಗೇಹಳ್ಳಿ ವಿರೂಪಾಕ್ಷಪುರದ ಶ್ರೀನಿವಾಸ, ಸಂಜಯನಗರ ಆರ್‌ಎಂವಿ 2ನೇ ಹಂತದ ರಾಮಮೂರ್ತಿ, ಗೆದ್ದಲಹಳ್ಳಿಯ ಕಾರ್ತಿಕ್ ಮತ್ತು ರಾಜೇಶ್ ಬಂಧಿತರು. ಆರೋಪಿಗಳು ಭಾನುವಾರ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದುರಾಳಿ ಗುಂಪಿನ ಹೆಬ್ಬಾಳದ ಕಾಂತರಾಜು ಎಂಬಾತನನ್ನು ಕೊಲೆಗೈದು ನಗನಾಣ್ಯ ದೋಚಲು ಹೊಂಚು ಹಾಕುತ್ತಿರುವಾಗ ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.