ಬೆಂಗಳೂರು ಗ್ರಾಮಾಂತರ

ಕನಕ ಜಯಂತಿಗೆ ಸರ್ಕಾರಿ ಸಿಬ್ಬಂದಿ ಹಾಜರಿ ಕಡ್ಡಾಯ

Published On :

ಮಾಗಡಿ: ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಕ್ತ ಶ್ರೇಷ್ಠ ಕನಕದಾಸರ ಜಯಂತೋತ್ಸವ ಸಮಾರಂಭಕ್ಕೆ ಕಡ್ಡಾಯವಾಗಿ ಭಾಗವಹಿಸಲು ಅಗತ್ಯ ಕ್ರಮ ವಹಿಸುವುದಾಗಿ ತಹಸೀಲ್ದಾರ್ ಶಿವಕುಮಾರ್ ತಿಳಿಸಿದ್ದಾರೆ.
ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನಕದಾಸ ಜಯಂತೋತ್ಸವ ಸಮಾರಂಭದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ.20 ರಂದು ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರವನದಲ್ಲಿ ಭಕ್ತಶ್ರೇಷ್‌ಠ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುವುದು. ಬೆಳಿಗ್ಗೆ 10 ಗಂಟೆಗೆ ದಾಸರ ಭಾವಚಿತ್ರವನ್ನು, ಜನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ಭವನಕ್ಕೆ ಕರೆತರಲಾಗುವುದು. ದಾಸರ ಕುರಿತು ಉಪನ್ಯಾಸ ಕಾರ್ಯಕ್ರಮ, ಶಾಲಾ ವಿದ್ಯಾರ್ಧಿಗಳಿಂದ ದಾಸರ ಕುರಿತು ಕೀರ್ತನೆಗಳನ್ನು ಹಾಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರನ್ನು ಸನ್ಮಾನಿಸಲಾಗುವುದು ಎಂದರು. ಚುನಾಯಿತ ಪ್ರತಿನಿಧಿಗಳು ಸಮಾಜದ ಮುಖಂಡರು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಪ್ರತಿಭಾ ಪುರಸ್ಕಾರ: ತಾಲೂಕು ಕುರುಬರ ಸಂಘದ ವತಿಯಿಂದ ಎಸ್ಸೆಎಸ್ಸೆಎಲ್ಲಿ, ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಹ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿಭಾಪುರಸ್ಕಾರಕ್ಕೆ ಸಂಬಂಧಫಟ್ಟ ದಾಖಲಾತಿಗಳೊಂದಿಗೆ ವಿದ್ಯಾರ್ಥಿಗಳು ನ.16ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ  ತಾ. ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಶಿವಕುಮಾರ್ ಮೊ.94483-29621 ಸಂಪರ್ಕಿಸಿ ಮಾಹಿತಿ ಪಡೆಯಬಹುದು. ತಾಪಂ ಅಧ್ಯಕ್ಷ ಜಿ.ಕೃಷ್ಣ, ಸಂಘದ ಮುಖಂಡ ಶಿವಬೀರಯ್ಯ,ರಂಗನಾಥ್, ಮೂರ್ತಿ, ಮಂಜುನಾಥ್, ಬಿಇಓ ರಂಗಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳು ಇತರರು ಭಾಗವಹಿಸಿದ್ದರು.

ಪುರಸಭೆಯಿಂದ ಪ್ಲಾಸ್ಟಿಕ್ ಕಂಟೈನರ್
ದೇವನಹಳ್ಳಿ:
ಇಲ್ಲಿನ ಪುರಸಭೆ ವತಿಯಿಂದ ಎಸ್‌ಎಫ್‌ಸಿ ಯೋಜನೆ ಅಡಿಯಲ್ಲಿ ರು.10 ಲಕ್ಷ ಅನುದಾನ ಬಂದಿರುವ ಹಿನ್ನೆಲೆಯಲ್ಲಿ ದೇವನಹಳ್ಳಿ ಪುರಸಭೆ ಒಂದನೇ ವಾರ್ಡಿನ ಎಲ್ಲ ಮನೆಗಳಿಗೆ ಕಸ ಸಂಗ್ರಹಣೆ ಮಾಡುವ ಒಂದು ಜೊತೆ ಪ್ಲಾಸ್ಟಿಕ್ ಕಂಟೈಗಳನ್ನು ಇಲ್ಲಿನ ಪುರಸಭೆ ವತಿಮಂಗಳವಾರ ವಿತರಣೆ ಮಾಡಲಾಯಿತು. ಇದೇ ವೇಳೆ ಪುರಸಭಾ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಮಾತನಾಡಿ, ದೇವನಹಳ್ಳಿ ಪುರಸಭೆ ವ್ಯಾಪ್ತಿಗೆ ಸೇರಿದ ಎಲ್ಲ 23 ವಾರ್ಡ್‌ಗಳಲ್ಲಿನ ಎಲ್ಲ ಮನೆಗಳಿಗೆ ಮನೆಯಲ್ಲಿನ ಕಸ ಸಂಗ್ರಹಣೆ ಮಾಡಲು ಪ್ಲಾಸ್ಟಿಕ್ ಕಂಟೈನರ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು. ಪುರಸಭೆ ಸದಸ್ಯ ಎಂ. ನಾರಾಯಣಸ್ವಾಮಿ ಮಾತನಾಡಿ, ಮಹಿಳೆಯರು ರಸ್ತೆ ಹೊರಗಡೆ ಕಸ ಎಸೆಯದೆ ಪ್ಲಾಸ್ಟಿಕ್ ಕಂಟೈನರ್‌ಗಳಲ್ಲಿ ಸಂಗ್ರಹಿಸಿ ಪುರಸಭೆ ವಾಹನಗಳಿಗೆ ನೀಡುವುದರ ಮೂಲಕ ಪಟ್ಟಣದ ಸ್ವಚ್ಛತೆ ಕಾಪಾಡಬೇಕು ಎಂದರು. ಪುರಸಭೆ ಅಧಿಕಾರಿಗಳಾದ ಮಮತಾ, ಸೈಯದ್ ಹಾಗೂ ಬಿಜಿಸ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.