ಬಲಿಷ್ಠ ಭಾರತಕ್ಕಾಗಿ ನರೇಂದ್ರಮೋದಿ ಪ್ರಧಾನಿ ಆಗಲಿ: ಸುರೇಶ್ ಕುಮಾರ್
ಕ.ಪ್ರ.ವಾರ್ತೆ , ಮಾಗಡಿ , ನ.13
ಬಲಿಷ್ಠ ಭಾರತಕ್ಕಾಗಿ ನರೇಂದ್ರಮೋದಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲೇಬೇಕು ಎಂದು ಶಾಸಕ ಸುರೇಶ್ ಕುಮಾರ್ ಹೇಳಿದರು.
ಅವರು ಮಾಗಡಿಯಲ್ಲಿ ತಾಲೂಕು ಬಿಜೆಪಿ ಏರ್ಪಡಿಸಿದ್ದ ಭಾರತ ಗೆಲ್ಲಿಸಿ ಯಾತ್ರೆ ಮತ್ತು ಬೃಹತ್ ಬೆ ೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡುತ್ತಾ ಈ ದೇಶದ ಅತ್ಯಂತ ದುರ್ಬಲ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಇವರಿಂದ ದೇಶ ದಿನೇ ದಿನೇ ದುರ್ಬಲವಾಗುತ್ತಿದೆ. 60 ವರ್ಷಗಳನ್ನಾಳಿದ ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ಅನ್ಯಾಯವಾಗಿದೆ. ಕೇವಲ ಭ್ರಷ್ಟಾಚಾರ, ಅಕ್ರಮಗಳಿಕೆ ನಡೆದಿದ್ದು, ಬದಲಾವಣೆ ಕಾಣದೆ, ದೇಶ ಅಧೋಗತಿಯತ್ತ ಸಾಗಿದೆ. ನ.17 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಭಾರತ ಗೆಲ್ಲಿಸಿ ರ್ಯಾಲಿಯಲ್ಲಿ ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಾಣಿ ಕೇಳಲು ಸುಮಾರು 5 ಲಕ್ಷ ಮಂದಿ ಈಗಾಗಲೇ ಟಿಕೆಟ್ ಪಡೆದು ಕಾದು ಕುಳಿತಿದ್ದಾರೆ ಎಂದರು.
ಒಮ್ಮೆ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಿದರೆ ಸಾಕು ಈಡೀ ದೇಶವೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುವುದರಲ್ಲಿ ಸಂದೇಹವಿಲ್ಲ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾಗರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಪ್ರಸಾದ್, ತಾಲೂಕು ಅಧ್ಯಕ್ಷ ಡಾ. ನವೀನ್, ಜಿಲ್ಲಾ ಉಪಾಧ್ಯಕ್ಷ ನಾರಾಯಣಸ್ವಾಮಿ, ಕೆ.ಎಸ್.ಹರೀಶ್, ಎಂ.ಟಿ. ಶಿವಣ್ಣ, ಟಿ.ಆರ್. ದಯಾನಂದ್, ಬಾಲಾಜಿ, ಜಯರಾಮು, ಮೋಹನ್ಕುಮಾರ್, ಚಂದ್ರು,ಸಿದ್ದಪ್ಪ, ಪ್ರವೀಣ್, ಮಹೇಶ್, ಮಹಾಂತೇಶ್ ಇತರರು ರ್ಯಾಲಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

