ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಿ
ಚನ್ನಪಟ್ಟಣ: ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡು ಮುಕ್ತ ಜೀವನ ನಡೆಸಬೇಕೆಂದು ಹಿರಿಯ ಸಿವಿಲ್ ನ್ಯಾಯಾದೀಶರಾದ ಕಿರಣ್ ಕಿಣಿ ಅವರು ಅಭಿಪ್ರಾಯಪಟ್ಟರು.
ತಾಲೂಕಿನ ಅಕ್ಕೂರು ಹೊಸಹಳ್ಳಿ ಪ್ರೌಢಶಾಲಾ ಆವರಣದಲ್ಲಿ ಚನ್ನಪಟ್ಟಣ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾನೂನು ಅರಿವು ನೆರವು ಹಾಗೂ ಮೆಗಾಲೋಕ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನ್ಯಾಯಾಧೀಶರು ಕಾನೂನಿಗೆ ಬಡವ ಶ್ರೀಮಂತ ಮೇಲು ಕೀಳು ಎಂಬ ಭೇದ ಭಾವವಿಲ್ಲವಾಗಿದ್ದು ಕಾನೂನು ಎಲ್ಲರಿಗೂ ಒಂದೇ ಆಗಿದೆ. ಕಾನೂನಿನ ಬಗ್ಗೆ ನಿಮಗೆ ಸ್ವಲ್ಪವಾದರೂ ತಿಳುವಳಿಕೆ ಉಂಟಾದಲ್ಲಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಹನುಮಂತಯ್ಯ ಮಾತನಾಡಿ ಪ್ರತಿಯೊಬ್ಬರಿಗೂ ಒಂದೇ ಕಾನೂನು ಭಾರತ ದೇಶದಲ್ಲಿದ್ದು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಆಧಾರದ ಮೇಲೆ ನ್ಯಾಯಾಂಗ ಇಲಾಖೆ ಕಾರ್ಯ ನಿರ್ವಹಿಸುತ್ತಿದ್ದು ಕಾನೂನು ರಚಿತವಾಗಿರುವುದೇ ಸಮನಾಗಿ ಆ ಕಾನೂನಿನ ಬಗ್ಗೆ ನಾವೆಲ್ಲರೂ ನಮಗೆ ತಿಳಿಯುವಷ್ಟಾದರೂ ತಿಳಿದು ಕೊಂಡಾಗ ಮಾತ್ರ ಕಾನೂನಿ ಪಾಲನೆಯಾಗಲಿದ್ದು ಕಾನೂನು ಪಾಲನೆ ನಾಗರಿಕ ಸಮಾಜದ ಪ್ರಮುಖ ಕರ್ತವ್ಯವೆಂದು ಹೇಳಿದರು. ಉಳಿದಂತೆ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದಶರಥ ಬಿ.ಕೆ ನಾಗೇಶ್ಮೂರ್ತಿ ಜಯಪ್ರಕಾಶ್ ತಾರಾನಾಥ್ ಎಂ.ಕೆ ಪ್ರಭು ನಾಗರಾಜು, ಎಸ್.ಎಲ್. ರಾಜು ಶಿವಲಿಂಗಯ್ಯ ಸೇರಿ ಹಲವರು ಹಾಜರಿದ್ದರು. ಸುತ್ತ ಮುತ್ತಲ ಹಳ್ಳಿಯ ಸುಮಾರು 300ಕ್ಕೂ ಅಧಿಕ ಪ್ರಕರಣಗಳನ್ನು ಇದೇ ವೇಳೆ ವಾದ ಮಂಡಿಸಲಾಯಿತು.
ಕುಡಿವ ನೀರಿಲ್ಲದೆ ಜನರ ಹಾಹಾಕಾರ
ನೆಲಮಂಗಲ: ನರಸೀಪುರ ಗ್ರಾಮದ ಹೊರ ವಲಯದಲ್ಲಿರುವ ತೋಪಿನಲ್ಲಿ ಸಮರ್ಪಕವಾಗಿ ಕುಡಿಯಲು ನೀರಿಲ್ಲದೆ ಜನರು ಪರಿತಪಿಸುವಂತಾಗಿದೆ. ಜನರಿಗೆ ನೀರಿನ ಬವಣೆ ತಪ್ಪಿಸಲು 2 ಬೋರ್ವೆಲ್ಗಳನ್ನು ಕೊರೆಸಿದರೂ ಸಹ ನೀರು ಸಿಗುತ್ತಿಲ್ಲ. ಅದಕ್ಕಾಗಿ ಪಂಚಾಯ್ತಿಯಿಂದ ಟ್ಯಾಂಕರ್ ಮೂಲಕ 2 ದಿನಗಳಿಗೊಮ್ಮೆ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ಕ್ಷೇತ್ರದ ಶಾಸಕರು ಮತ್ತು ಜಿ.ಪಂ.ಸದಸ್ಯರು ಶೀಘ್ರವಾಗಿ ನೀರಿನ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿನ ಬಗ್ಗೆ ಪಂಚಾಯ್ತಿಯ ಪ್ರಭಾರಿ ಅಧ್ಯಕ್ಷ ರಾಮಾನಂಜಿನಯ್ಯ ಪ್ರತಿಕ್ರಿಯಿಸಿ ಪಕ್ಕದ ಗ್ರಾಮದ ಹಾಲೇನಹಳ್ಳಿ ಅಥವಾ ನರಸೀಪುರ ಗ್ರಾಮದಿಂದ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದು ವಾರದಲ್ಲಿ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

