ಬೆಂಗಳೂರು ಗ್ರಾಮಾಂತರ

ದೇವನಹಳ್ಳಿಯಲ್ಲಿ ನಾಳೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಶಾಖೆ ಕಾರ್ಯಾರಂಭ

Published On :

ದೇವನಹಳ್ಳಿ: ಬೆಂಗಳೂರಿನ ಹೆಬ್ಬಾಳದಲ್ಲಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ಕಳೆದ 40 ವರ್ಷಗಳಿಂದ ಆರೋಗ್ಯ ಸೇವೆ ನೀಡುತ್ತಿದ್ದು ನ.16 ರಿಂದ ದೇವನಹಳ್ಳಿಯ ಪಿಎಲ್‌ಡಿ ಬ್ಯಾಂಕ್ ಕಟ್ಟಡದಲ್ಲಿ ಆಸ್ಪತ್ರೆಯ ಹೊಸ ಘಟಕ ಆರಂಭವಾಗಲಿದ್ದು ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕರಿಗೆ ಅನುಕೂಲವಾಗಲಿದೆ.  ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ  ಮೂರು ವಿವಿಧ ಆರೋಗ್ಯ ಸೇವೆಗಳಿಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದ್ದು ದೇವನಹಳ್ಳಿ ಜನರ ಬಹುದಿನಗಳ ಬೇಡಿಕೆಯಂತೆ ಆಸ್ಪತ್ರೆಯ ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಆಸ್ಪತ್ರೆಯ ಡೆಪ್ಯೂಟಿ ಡೈರಕ್ಟರ್ ನವೀನ್ ಥಾಮಸ್ ತಿಳಿಸಿ ಇದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು ದಿನದ 24 ಗಂಟೆಯೂ ಎಲ್ಲ ಬಗೆಯ ಸೌಕರ್ಯಗಳನ್ನು ಹೊಂದಿದ್ದು ಹೊರರೋಗಿ ಮತ್ತು ಒಳರೋಗಿ ಸೇವೆಗಳು ಅಲ್ಲದೆ ತುರ್ತು ಸೇವೆಗಳು, ಲ್ಯಾಬೋರೇಟರಿ, ಎಕ್ಸ್‌ರೇ, ಇಸಿಜಿ, ಅಲ್ಟ್ರಾ ಸೌಂಡ್ ಸ್ಕ್ಯಾನ್ ಮತ್ತು ಆಪರ್ನ್ ಥಿಯೇಟರ್ ಮತ್ತು ಮೆಟರ್ನಿಟಿ ಸೇವೆಗಳು ದೊರೆಯಲಿವೆ ಎಂದರು. ಅಪಘಾತ ಮತ್ತು ಇತರ ಸಂಧರ್ಭದಲ್ಲಿ ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾದ ರೋಗಿಗಳಿಗೆ ಗುಣ ಮಟ್ಟದ ಆರೋಗ್ಯ ಸೇವೆ ನೀಡುವುದರಿಂದ ಅನೇಕ ಸಂದರ್ಭಗಳಲ್ಲಿ ಆಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು  ಆಸ್ಪತ್ರೆಯ ನಿರ್ದೇಶಕ ಡಾ.ಅಲೆಕ್ಸಾಂಡರ್ ಥಾಮಸ್ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಅಧಿಕಾರಿಗಳಾದ ಡಾ. ಟಿ.ಎಸ್. ಗಿರೀಶ್ ಹಾಗೂ ಡಾ.ಕಿಂಗ್ ಸ್ಲೈ  ರಾಬರ್ಟ್ ಜ್ಞಾನದೊರೈ ಉಪಸ್ಥಿತರಿದ್ದು ನ.16 ರಂದು ನಡೆಯುವ ಆಸ್ಪತ್ರೆಯ ಉಧ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ  ಕೆ.ಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಗೂ ಶಾಸಕ ಪಿಳ್ಳಮುನಿಶಾಮಪ್ಪ ಭಾಗವಹಿಸಲಿದ್ದಾರೆ ಎಂದರು.

ಇಂದು ಮಾಗಡಿ ಹಬ್ಬ, ರಾಜ್ಯೋತ್ಸವ
ಮಾಗಡಿ:
ತಾಲೂಕು ಆಡಳಿತ ಮತ್ತು ನಾಡಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ನ.15 ರಂದು  ಬೆಳಿಗ್ಗೆ 8.30ಕ್ಕೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಾಗಡಿ ಹಬ್ಬ ಮತ್ತು 58ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಾಡಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರೂ ಆಗಿರುವ ತಹಸೀಲ್ದಾರ್ ಶಿವಕುಮಾರ್ ತಿಳಿಸಿದ್ದಾರೆ.  ಶಾಸಕ ಎಚ್.ಸಿ. ಬಾಲಕೃಷ್ಣ ಧ್ವಜಾರೋಹಣ ನೆರವೇರಿಸಲಿದ್ದು, ತಾ.ಪಂ. ಅಧ್ಯಕ್ಷ ಜಿ. ಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಧನಂಜಯ, ಮುದ್ದುರಾಜ ಯಾದವ್, ಹಂಸಕುಮಾರಿ, ವಿಜಯಕುಮಾರ್, ರಂಗಸ್ವಾಮಿ, ತಾಲೂಕು ಪಂಚಾಯ್ತಿ ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಸದಸ್ಯರು, ಪುರಸಭೆ ಚುನಾಯಿತ ಪ್ರತಿನಿಧಿಗಳು, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ಇತರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.