ಮಕ್ಕಳಲ್ಲಿರುವ ಕೌಶಲ್ಯವನ್ನು ಗುರುತಿಸಿ ಉತ್ತೇಜಿಸಿ
ನೆಲಮಂಗಲ ಮಕ್ಕಳಲ್ಲಿರುವ ಕೌಶಲ್ಯವನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವುದು ಪೋಷಕರ ಕರ್ತವ್ಯ ಎಂದು ಸರ್ಕಲ್ ಇನ್ಸ್ಪೆಕ್ಟರ್ ಪರಮೇಶ್ ತಿಳಿಸಿದರು.
ಅವರು ಗುರುವಾರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಪರಿಕರಗಳನ್ನು ವಿತರಿಸಿ ಮಾತನಾಡುತ್ತಾ ಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಸ್ಪದವಾಗಿ ಬಿದ್ದಿರುವಂತಹ ವಸ್ತುಗಳನ್ನು ಮುಟ್ಟಬಾರದು. ದೃಶ್ಯ ಮಾಧ್ಯಮಗಳಿಂದ ಮಕ್ಕಳು ತಮ್ಮ ಏಕಾಗ್ರತೆ ಕಳೆದುಕೊಳ್ಳಬಾರದು. ದೇಶಕ್ಕೆ ತ್ಯಾಗ ಹಾಗೂ ಅದ್ವಿತೀಯ ಸಾಧನೆ ಮಾಡಿದಂತಹ ಮಹನೀಯರ ಜೀವನದ ಹಾದಿ ತಿಳಿದುಕೊಂಡು ಅವರಂತೆ ಆದರ್ಶರಾಗಿ ಯುವ ಪೀಳಿಗೆ ಹೊರಹೊಮ್ಮಬೇಕು ಎಂದರು. ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡೆ ಹಾಗೂ ಸಾಮಾಜಿಕ ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಬೇಕು. ಸರ್ವರನ್ನು ಸಮಾಜದಲ್ಲಿ ಸಮಾನತೆಯಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ಹೇಳಿದರು. ಪಟ್ಟಣ ಠಾಣೆ ಸಬ್ಇನ್ಸ್ಪೆಕ್ಟರ್ ಬಾಲಾಜಿ ಬಾಬು, ಶಾಲಾ ಶಿಕ್ಷಕರು ಸೇರಿದಂತೆ ನೂರಾರು ಮಕ್ಕಳು ಇದ್ದರು.
ಸಡಗರದ ಮಕ್ಕಳ ದಿನಾಚರಣೆ
ಮಾಗಡಿ: ತಾಲೂಕಿನ ಕುದೂರು ಹೋಬಳಿ ಶಿವಗಂಗೆ ತಪ್ಪಲಿನಲ್ಲಿರುವ ಕುಗ್ರಾಮ ಬೆಟ್ಟಹಳ್ಳಿ ಕಾಲೊನಿ ಶಾಲಾ ಮಕ್ಕಳಿಂದಲೇ ಮಕ್ಕಳ ದಿನಾಚರಣೆ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ಶಾಲಾವರಣದಲ್ಲಿರುವ ಸಮುದಾಯ ಭವನದಲ್ಲಿ ಮಕ್ಕಳಿಗೆ ಪೋಷಕರೆಲ್ಲರೂ ಸೇರಿ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳೇ ಅತಿಥಿಗಳಾಗಿ ವೇದಿಕೆಯಲ್ಲಿದ್ದರು. ಮಕ್ಕಳಿಗೆ ಶಿಕ್ಷಕರು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೋಷಕರು ವಿಜೇತ ತಂಡಗಳಿಗೆ ನೀಡಲು ತಂದಿದ್ದ ಬಹುಮಾನವನ್ನು ಶಿಕ್ಷಕರು ವಿತರಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು. ರಘುಪತಿ, ಜಯಶ್ರೀ, ಕಮಲಮ್ಮ, ಪಾತರಾಜು ಭಾಗವಹಿಸಿ ಮಕ್ಕಳ ದಿನಾಚರಣೆ ಸಂಭ್ರಮ ಸವಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

