ದೇವನಹಳ್ಳಿಯಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆ ಉದ್ಘಾಟನೆ
ದೇವನಹಳ್ಳಿ: ಇಲ್ಲಿನ ಪಿಎಲ್ಡಿ ಬ್ಯಾಂಕ್ ಕಟ್ಟಡದಲ್ಲಿ ಸೆಟಲೈಟ್ ಸೆಂಟರ್ ಸೌಲ್ಯಭ್ಯ ಹೊಂದಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯ ನೂತನ ಶಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಉಧ್ಘಾಟನಾ ಸಮಾರಂಭ ಶನಿವಾರ ಆಯೋಜಿಸಲಾಗಿತ್ತು.
ಸಮಾರಂಭದ ಉದ್ಘಾಟನೆಯನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ನೆರವೇರಿಸಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆ 1973ರಲ್ಲಿ ಆರಂಭಗೊಂಡು ಪ್ರತಿ ವರ್ಷ 20 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ ಎಂದರಲ್ಲದೆ ಯಾವುದೇ ಲಾಭದ ಉದ್ದೇಶದಿಂದ ಆಸ್ಪತ್ರೆ ಕೆಲಸ ಮಾಡುತ್ತಿಲ್ಲ. ಬದಲಾಗಿ ರೋಗಿಗಳ ಸೇವೆಯೇ ಗುರಿಯಾಗಿದೆ ಎಂದರಲ್ಲದೆ ಎಪಿಎಲ್ ಕಾರ್ಡ್ ಹೊಂದದವರಿಗೂ ಆರೋಗ್ಯ ಸೇವೆ ದೊರೆಯಲು ಸರ್ಕಾರ ಮುಂದಾಗಿದೆ ಎಂದರು.
ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ ವಿಕಲಚೇತನರಿಗೆ ಮೂರು ಚಕ್ರದ ಸೈಕಲ್ ವಿತರಣೆ ಮಾಡಿದರಲ್ಲದೆ ದೇಶದಲ್ಲಿರುವ ವಿಕಲ ಚೇತನರ ಅಂಕಿ ಅಂಶ ನಂಬಲು ಸಾಧ್ಯವಾಗುತ್ತಿಲ್ಲ. ವಾಸ್ತವ ಅಂಕಿ ಅಂಶಗಳು ಬೇರೆಯಾಗಿದೆ ಎಂದರಲ್ಲದೆ ಇಲ್ಲಿನ ವಿಲಚೇತನರ ಪುನರ್ವಸತಿ ಕೇಂದ್ರಕ್ಕೆ ಎರಡು ಲಕ್ಷ ರು. ತಮ್ಮ ಶಾಸಕರ ನಿಧಿಯಿಂದ ಕೊಡುವುದಾಗಿ ತಿಳಿಸಿದರು.
ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮಾತನಾಡಿ ಜಿಲ್ಲಾ ಮಟ್ಟದ ವಿಕಲಚೇತನರ ಪುನವರ್ಸತಿ ಕೇಂದ್ರ ಇಲ್ಲಿ ಸ್ಥಾಪನೆಯಾಗಿರುವುದು ಅಭಿನಂದನೀಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಪಿಳ್ಳಮುನಿಶಾಮಪ್ಪ ವಹಿಸಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯವರು ದೇವನಹಳ್ಳಿಯಲ್ಲಿ ತಮ್ಮ ಶಾಖೆಯನ್ನು ಆರಂಭಿಸಿರುವುದು ಅಭಿನಂದನೀಯ ಎಂದರಲ್ಲದೆ ದೇವನಹಳ್ಳಿ ಮತ್ತು ವಿಜಯಪುರಗಳಲ್ಲಿ ಎರಡು ಸಾರ್ವಜನಿಕ ಆಸ್ಪತ್ರೆ ಮತ್ತು 11 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇದ್ದರೂ ಸರಿಯಾದ ವೈದ್ಯರ ಮತ್ತು ಆರೋಗ್ಯ ಕಾರ್ಯಕರ್ತರ ಸಿಬ್ಬಂದಿ ಕೊರತೆ ಇರುವುದರಿಂದ ಸರ್ಕಾರ ಅಗತ್ಯ ಸಿಬ್ಬಂದಿಯನ್ನು ನೇಮಿಸಬೇಕು. ಅಲ್ಲದೆ ಅಗ್ನಿಶಾಮಕ ಠಾಣೆ ಅಗತ್ಯವಾಗಿದೆ ಎಂದರು. ಹೊಸದಾಗಿ ಆರಂಭವಾಗಿರುವ ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರು. ನೀಡುವುದಾಗಿ ತಿಳಿಸಿದರು.
ಮಾಜಿ ಸಚಿವ ಡಾ.ಮುಮ್ತಾಜ್ ಅಲಿಖಾನ್ ಹಿರಿಯ ನಾಗರಿಕ ಗುರುತಿನ ಚೀಟಿ ವಿತರಣೆ ಮಾಡಿದರು.
ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸಿಇಒ ಡಾ.ಅಲೆಕ್ಸಾಂಡರ್ ಥಾಮಸ್ ಸ್ವಾಗತ ಕೋರಿದರು, ಆಸ್ಪತ್ರೆಯ ಡೆಪ್ಯೂಟಿ ಡೈರಕ್ಟರ್ ಡಾ.ಗಿಫ್ ಟಾರಿಮನ್ ಆಸ್ಪತ್ರೆಯ ಸೇವಾಕಾರ್ಯಗಳ ಪ್ರಾಸ್ತಾವಿಕವಾಗಿ ಮಾತನಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರ ಶಾಸಕ ಡಾ.ಕೆ.ಸುಧಾಕರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ರಾಧಿಕಾ ತ್ಯಾಗರಾಜ್, ಪಿಎಲ್ಡಿ ಬ್ಯಾಂಕಿನ ಅಧ್ಯಕ್ಷ ಸಿ.ಮುನಿರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಮಾಜಿ ಪುರಸಭಾಧ್ಯಕ್ಷ ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

