ಇಂದು ಗ್ರಂಥಾಲಯ ಸಪ್ತಾಹ
ಚನ್ನಪಟ್ಟಣ: ನ.19ರಂದು ಇಲ್ಲಿನ ಗಾಂಧಿ ಭವನದ ಗ್ರಂಥಾಲಯದ ಒಳಾಂಗಣದ ಆವರಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಏರ್ಪಡಿಸಲಾಗಿದೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ರಘುಕುಮಾರ್ ಉದ್ಘಾಟನೆ ನೆರವೇರಿಸಲಿದ್ದು, ಗ್ರಂಥಾಲಯ ಸಪ್ತಾಹ ಕುರಿತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ. ಕೆ.ಎಂ. ಮಾಯೀಗೆಗೌಡ ಉಪನ್ಯಾಸ ನೀಡಲಿದ್ದಾರೆ. ತಾಲೂಕು ಕಸಾಪ ಅಧ್ಯಕ ಎಂ. ಶಿವಮಾದು ಅಧ್ಯಕ್ಷತೆ ವಹಿಸಲಿದ್ದಾರೆ. ಬಮೂಲ್ ನಿರ್ದೇಶಕ ಎಸ್. ಲಿಂಗೇಶ್ಕುಮಾರ್, ಮಾಜಿ ನಗರಸಭೆ ಅಧ್ಯಕ್ಷ ಎಚ್. ನಾಗರಾಜ್ ಹಾಗೂ ಗ್ರಂಥಾಲಯ ಸಹಾಯಕ ಕೆ.ಪಿ. ಕುಮಾರ್ ಭಾಗವಹಿಸಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿ ವಿಜಯ ರಾಂಪುರ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ ಎಂದು ಗ್ರಂಥಾಲಯದ ಉಸ್ತುವಾರಿ ಸಂಚಾಲಕ ಬಸವರಾಜು ತಿಳಿಸಿದ್ದಾರೆ.
ಇಂದು ಟಿಎಂಸಿ ಬ್ಯಾಂಕ್ ಸುವರ್ಣ ಮಹೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ದಿ ಟೆಕ್ಸ್ಟೈಲ್ ಮ್ಯಾನುಫ್ಯಾಕ್ಚರರ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್(ಟಿಎಂಸಿ ಬ್ಯಾಂಕ್)ನ ಸುವರ್ಣ ಮಹೋತ್ಸವ ಕಾರ್ಯಕ್ರಮ ನ.19ರಂದು ಬೆಳಗ್ಗೆ 10.30ಕ್ಕೆ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಗಾಯತ್ರಿ ಪೀಠ ಮಹಾಸಂಸ್ಥಾನ ಮಠದ ದಯಾನಂದಪುರಿ ಸ್ವಾಮೀಜಿ ಉದ್ಘಾಟಿಸಲಿದ್ದು, ಪುಷ್ಪಾಂಡಜ ಮುನಿ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಡಾ. ಎಂ. ವೀರಪ್ಪ ಮೊಯ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಜವಳಿ ಸಚಿವ ಬಾಬೂರಾವ್ ಚಿಂಚನಸೂರ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಶಾಸಕ ಟಿ. ವೆಂಕಟರಮಣಯ್ಯ, ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ. ಶ್ರೀನಿವಾಸ್ ಮತ್ತಿತರರು ಭಾಗವಹಿಸಲಿದ್ದಾರೆ. ಬ್ಯಾಂಕ್ ಅಧ್ಯಕ್ಷ ಕೆ.ಪಿ. ವಾಸುದೇವ್ ಅಧ್ಯಕ್ಷತೆ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

