ಕುಡಿವ ನೀರಿನ ಸಮಸ್ಯೆ; ಪ್ರತಿಭಟನೆ
ಮಾಗಡಿ: ತಾಲೂಕಿನ ಗವಿನಾಗಮಂಗಲದಲ್ಲಿ ಹಲವಾರು ವರ್ಷಗಳಿಂದ ಇರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ಜನಾಂದೋಲನಾ ಸಂಘಟನೆ ಪಟ್ಟಣದಲ್ಲಿ ಬೃಹತ್ ರ್ಯಾಲಿ ನಡೆಸಿತು. ಕರ್ನಾಟಕ ಜನಾಂದೋಲನಾ ಸಂಘಟನೆ ನೇತೃತ್ವದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಸಂಘಟನೆ ಅಧ್ಯಕ್ಷ ಎನ್. ನರಸಿಂಹಮೂರ್ತಿ ಮಾತನಾಡಿ, ಬೆಳಗವಾಡಿ ಗ್ರಾಮದ ಎಸ್ಸಿ ಕಾಲೋನಿಗೆ ಆದಷ್ಟು ಬೇಗ ಕೊಳವೆಬಾವಿ ಕೊರೆಸಿ ನೀರು ಪೂರೈಕೆ ಮಾಡಬೇಕು. ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಬೇಕು. ಶೇ.22.75 ಯೋಜನೆಯಡಿ ಪಂಚಾಯ್ತಿ ವಾರು ಮನೆಗಳನ್ನು ನಿರ್ಮಿಸಿಕೊಡಬೇಕು. ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಿಟ್ಟಿರುವ ಅನುದಾನದಲ್ಲಿ ಶೌಚಾಲಯ, ದನದ ಕೊಟ್ಟಿಗೆ ನಿರ್ಮಿಸಿಕೊಳ್ಳಲು ಅನುದಾನ ನೀಡಬೇಕು. ಬಗರ್ಹುಕುಂ ಸಾಗುವಳಿ ಭೂಮಿಯನ್ನು ಕೂಡಲೇ ಮಂಜೂರು ಮಾಡಬೇಕು. ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಎಸ್ಸಿ, ಎಸ್ಟಿ ವರ್ಗದ ಜನತೆಯ ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸಿ ಮೆರವಣಿಗೆ ನಡೆಸಿದರು. ನಂತರ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಅಕ್ಕೋಜಿ ಅವರಲ್ಲಿ ಮನವಿ ಪತ್ರ ಸಲ್ಲಿಸಿ ಸರ್ಕಾರಕ್ಕೆ ಕಳುಹಿಸುವಂತೆ ಆಗ್ರಹಿಸಿದರು. ಪ್ರತಿಭಟನಾ ರ್ಯಾಲಿಯಲ್ಲಿ ಸಂಘಟನೆಯ ಪದಾಧಿಕಾರಿಗಳು ನೂರಾರು ರೈತರು, ಮಹಿಳೆಯರು ಭಾಗವಹಿಸಿದ್ದರು.
ರುಡ್ಸೆಟ್ನಲ್ಲಿ ತರಬೇತಿಗೆ ಅರ್ಜಿ
ರಾಮನಗರ: ನೆಲಮಂಗಲದ ಅರಿಶಿನಕುಂಟೆಯ ರುಡ್ಸೆಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ, ನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಉಚಿತ ವಸತಿಯುತ ಅಪಾರಲ್ ಟ್ರೈನಿಂಗ್ ಹಾಗೂ 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿ ನೀಡಲಿದೆ. ತರಬೇತಿಯು ಡಿಸೆಂಬರ್ ಮೊದಲ ವಾರದಿಂದ ಪ್ರಾರಂಭವಾಗಲಿದ್ದು, 18ರಿಂದ 45 ವರ್ಷದೊಳಗಿನ, ಕನ್ನಡ ಓದಲು, ಬರೆಯಲು ಬಲ್ಲ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ನ.30ರೊಳಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ ಅಂಚೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು. ವಿವರಕ್ಕೆ ದೂ. 080- 27728166, ಮೊ. 94817 78047 ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಮಾರುಕಟ್ಟೆ ಸಪ್ತಾಹ ಕಾರ್ಯಕ್ರಮ
ರಾಮನಗರ: ರಾಮನಗರದ ಕೃಷಿ ಮಾರಾಟ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಯುಕ್ತಾಶ್ರಯದಲ್ಲಿ ನ.16ರಿಂದ 22ರವರೆಗೆ ಮಾರುಕಟ್ಟೆ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

