ಅರುಣಾಚಲೇಶ್ವರ ದೇವಾಲಯದ ಜೀರ್ಣೋದ್ಧಾರ, ಮಹಾದ್ವಾರ ಪೂಜೆ
ಕನಕಪುರ: ತಾಲೂಕಿನ ಪ್ರಾಚೀನ, ಇತಿಹಾಸ ಪ್ರಸಿದ್ಧ ಅರುಣಾಚಲೇಶ್ವರ ದೇವಾಲಯದ ಜೀರ್ಣೋದ್ಧಾರ ಹಾಗೂ ಮಹಾದ್ವಾರ ಪೂಜೆಯನ್ನು ಮಹರ್ಷಿ ದರ್ಶನ ಖ್ಯಾತಿಯ ಆನಂದಸಿದ್ಧಿ ಪೀಠದ ಸಂಸ್ಥಾಪಕ ಡಾ. ಆನಂದ ಗುರೂಜಿ ನೆರವೇರಿಸಿದರು. ಸಂಸದ ಡಿ.ಕೆ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ. ಮಲ್ಲಪ್ಪ ಮಾತನಾಡಿ, ಯಾರ ನೆರವು ಇಲ್ಲದೆ ಆಸಕ್ತ ಸಾರ್ವಜನಿಕರ ದೇಣಿಗೆಯಿಂದ ಎರಡು ಕೋಟಿಗೂ ಮಿಗಿಲಾದ ಜೀರ್ಣೋದ್ಧಾರ ಕಾರ್ಯ ಕೈಗೊಳ್ಳಲಾಗಿದೆ. ಒಂಭತ್ತು ದಿನಗಳ ಕಾರ್ಯಕ್ರಮದಲ್ಲಿ ದೇವಾಲಯದ ಪ್ರಾಂಗಣದಲ್ಲಿ 30 ವಿವಿಧ ದೇವ, ದೇವತೆಗಳ ಪ್ರತಿಷ್ಠಾಪನೆ ವಿಧ್ಯುಕ್ತವಾಗಿ ನಡೆಯಲಿದೆ. ಪಕ್ಷಾತೀತರಾಗಿ ಎಲ್ಲರೂ ಪುಣ್ಯ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ ಎಂದರು.
ಸಂಸದ ಡಿ.ಕೆ. ಸುರೇಶ್ಮಾತನಾಡಿ, ಬೆಂಗಳೂರಿಗೆ ಅತಿ ಸಮೀಪದಲ್ಲಿರುವ ಹಾರೋಹಳ್ಳಿ ಪ್ರಗತಿಯಲ್ಲಿ ದಾಪುಗಾಲು ಹಾಕುತ್ತಿದೆ. ಸದ್ಯದಲ್ಲಿಯೇ ನಗರಸಭೆಯಾಗಿ ಪರಿವರ್ತನೆಗೊಳ್ಳಲಿದೆ. ಕೈಗಾರಿಕೆಗಳೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾರಂಭವಾಗುತ್ತಿವೆ ಎಂದು ಹೇಳಿದರು.
ಸಮಾರಂಭದಲ್ಲಿ ಮಾಜಿ ವಿಪ ಸದಸ್ಯ ಎಸ್. ರವಿ, ಗ್ರಾಪಂ ಅಧ್ಯಕ್ಷ ವೆಂಕಟರಾಜು, ಸಬ್ದರ್ ಹುಸೇನ್, ಜಾಕೀರ್ ಪಾಷ, ಜಿಪಂ ಸದಸ್ಯೆ ಗೀತಾ ಈಶ್ವರ್, ಗೋವಿಂದಯ್ಯ,ಸುರೇಶ್, ಸೋಮಶೇಖರ್, ಪುರುಷೋತ್ತಮ್ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

