ಇಂದಿರಾ ಗಾಂಧಿ ಜನ್ಮ ದಿನಾಚರಣೆ
ದೊಡ್ಡಬಳ್ಳಾಪುರ: ಇಂದಿರಾ ಗಾಂಧಿ ಈ ದೇಶ ಕಂಡ ಧೀಮಂತ ಮಹಿಳೆ. ದೇಶವನ್ನು 4 ಬಾರಿ ಪ್ರಧಾನಿಯಾಗಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದು ದೇಶವನ್ನು ಇತರ ರಾಷ್ಟ್ರಗಳ ಸಾಲಿನಲ್ಲಿ ಪ್ರಬಲ ಕಟ್ಟುವ ಕನಸು ಹೊತ್ತಿದ್ದವರು ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು. ಇಲ್ಲಿನ ಸೋಮೇಶ್ವರ ಬಡಾವಣೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದ ಇಂದಿರಾಗಾಂಧಿ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ತಿ. ರಂಗರಾಜು, ಕೇಂದ್ರ ಉಕ್ಕು ಸಚಿವಾಲಯದ ನಾಮನಿರ್ದೇಶಿತ ಸದಸ್ಯ ಸಿ.ಜಿ. ನಾಗೇಶ್, ಅಖಿಲ ಭಾರತ ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮದ ನಾಮನಿರ್ದೇಶಿತ ಸದಸ್ಯ ಕೆ.ಜಿ. ಅಶೋಕ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಡಿ.ವಿ. ಅಶ್ವತ್ಥಪ್ಪ, ನಗರಸಭಾ ಸದಸ್ಯ ಕೆ.ಜಿ. ರಘುರಾಂ, ಲೋಕೇಶ್ಬಾಬು, ಹಿರಿಯ ಮುಖಂಡ ಜವಾಜಿ ಸೀತಾರಾಂ, ಯುವ ಘಟಕದ ಅಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷ ಗೋವಿಂದರಾಜು ಸೇರಿದಂತೆ ಹಲವು ಘಟಕಗಳ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

