ಬೆಂಗಳೂರು ಗ್ರಾಮಾಂತರ

ಶಿಕ್ಷಣ ಸಂಸ್ಥೆಗಳಲ್ಲೇ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಿ: ಡಿಸಿ

Published On :

ರಾಮನಗರ: ಮತದಾರರ ಸಂಕ್ಷಿಪ್ತ ಪರಿಷ್ಕರಣೆಗೆ ನ.29ರವರೆಗೆ ಕಾಲಾವಕಾಶವಿದೆ. ಈ ಅವಧಿಯಲ್ಲಿ 2014ರ ಜ.1ಕ್ಕೆ 18 ವರ್ಷ ತುಂಬುವ ಯುವಜನರು ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲೇ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಶ್ವನಾಥ್ ತಿಳಿಸಿದ್ದಾರೆ. ಹೆಸರು ನೋಂದಣಿ ಮಾಡಿಸಿದವರಿಗೆ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ಮತದಾನದ ಹಕ್ಕು ದೊರೆಯಲಿದೆ. ಶಿಕ್ಷಣ ಸಂಸ್ಥೆಗಳಲ್ಲದೆ ವಿಶೇಷ ವ್ಯವಸ್ಥೆಯಲ್ಲದೆ ಸ್ಥಳೀಯ ತಾಲೂಕು ಕಚೇರಿಯಲ್ಲೂ ನೋಂದಣಿ ಮಾಡಬಹುದಾಗಿದ್ದು, ನಮೂನೆ 6 ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಅರ್ಜಿಯೊಂದಿಗೆ ತಮ್ಮ ವಯಸ್ಸು ಮತ್ತು ನಿವಾಸದ ದೃಢೀಕರಣವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಹೆಸರು, ಪೋಷಕರ ಹೆಸರು, ಲಿಂಗ, ವಯಸ್ಸು, ಭಾವಚಿತ್ರ ತಪ್ಪಾಗಿದ್ದರೆ ನಮೂನೆ 8ರಲ್ಲಿ ಅರ್ಜಿ ಸಲ್ಲಿಸಿ ಆ ನ್ಯೂನತೆಯನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ 7,93,723 ಮತದಾರರಿದ್ದಾರೆ. ಈ ಪೈಕಿ 3,98,840 ಪುರುಷರು, 3,94,833 ಮಹಿಳೆಯರು ಹಾಗೂ 50 ಇತರೆ ಮತದಾರರಿದ್ದಾರೆ. 8042 ಮಂದಿಯು 18 ರಿಂದ 19 ವಯೋವಾನದವರು. ಇವರ ಪ್ರಮಾಣ ಒಟ್ಟು ಮತದಾರರಿಗೆ ಹೋಲಿಸಿದಲ್ಲಿ ಶೇ.1ರಷ್ಟು ಮಾತ್ರ ಎಂದು ವಿಶ್ವನಾಥ್ ವಿವರಿಸಿದ್ದಾರೆ.

ವಿದ್ಯುತ್ ಮಗ್ಗಗಳ ನಿಗಮಕ್ಕೆ ನಾಮ ನಿರ್ದೇಶನ
ದೊಡ್ಡಬಳ್ಳಾಪುರ: ಅಖಿಲ ಭಾರತ ವಿದ್ಯುತ್ ಮಗ್ಗಗಳ ನಿಗಮ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಕಾಂಗ್ರೆಸ್ ಯುವ ಮುಖಂಡ ಕೆ.ಜಿ. ಅಶೋಕ್ ಆಯ್ಕೆಯಾಗಿದ್ದಾರೆ. ನಾಮ ನಿರ್ದೇಶನಗೊಂಡಿರುವ ಅವರನ್ನು ಶಾಸಕ ಟಿ. ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಸಿ.ಡಿ. ಸತ್ಯನಾರಾಯಣಗೌಡ, ಪಕ್ಷದ ಮುಖಂಡರಾದ ನಾರಾಯಣಗೌಡ, ಎಸ್. ರಾಜಕುಮಾರ್, ಡಿ.ವಿ. ಅಶ್ವತ್ಥಪ್ಪ, ನಗರಸಭೆ ಸದಸ್ಯರು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.