25ರಂದು ಕನ್ನಡ ರಾಜ್ಯೋತ್ಸವ
ಚನ್ನಪಟ್ಟಣ: ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ವೈಭವ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ನ.25ರಂದು ಹಮ್ಮಿಕೊಳ್ಳಲಾಗಿದೆ. ತಿಟ್ಟಮಾರನಹಳ್ಳಿ ಗ್ರಾಪಂ ಅಧ್ಯಕ್ಷೆ ಜಯಮ್ಮ ಉದ್ಘಾಟಿಸಲಿದ್ದು, ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ವಿ. ಗೋವಿಂದರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತಿಟ್ಟಮಾರನಹಳ್ಳಿ ಗ್ರಾಪಂ ಸದಸ್ಯ ಕೆಂಗಲ್ ಮೂರ್ತಿ, ಅಂತಾರಾಷ್ಟ್ರೀಯ ಕ್ರೀಡಾಪಟು ಪಿ.ಜೆ. ಗೋವಿಂದರಾಜು, ಸಾಹಿತಿ ವಿಜಯ್ ರಾಂಪುರ, ಗ್ರಾ.ಪಂ ಸದಸ್ಯ ಶೇಖರಾಚಾರ್, ಸಾಗರ್, ಎಸ್‌ಡಿಎಂಸಿ ಅಧ್ಯಕ್ಷೆ ಸುಮಿತ್ರ ಇನ್ನು ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಜನಸಂಪರ್ಕ ಸಭೆ
ವಿಜಯಪುರ: ಪಟ್ಟಣ ಪೊಲೀಸ್ ಠಾಣಾ ಆವರಣದಲ್ಲಿ ನ.22ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲಿಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ವಿಜಯಪುರ, ಚನ್ನರಾಯಪಟ್ಟಣ ಮತ್ತು ವಿಶ್ವನಾಥಪುರ ಠಾಣೆಗೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಯ ಬಗ್ಗೆ ದೂರು ನೀಡಬಹುದಾಗಿದೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ರಮೇಶ್ ಬಾನೋತ್, ಅಡಿಷನ್ ಎಸ್ಪಿ ಅಬ್ದುಲ್ ಅಹದ್, ಡಿವೈಎಸ್‌ಪಿ ಶ್ರೀಧರ್, ಶಾಸಕ ಪಿಳ್ಳಮುನಿಶ್ಯಾಮಪ್ಪ ಹಾಗೂ ಠಾಣಾ ಎಸ್.ಐಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಗೆ ತಿಳಿಸಿದೆ.
ಕೊಂಡಸಂದ್ರದಲ್ಲಿ ಚಂಡಿಕಾ ಹೋಮ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಕೊಂಡಸಂದ್ರ ಕ್ಷೇತ್ರದಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಗಣಪತಿ, ಸುಬ್ರಹ್ಮಣ್ಯ ಸ್ವಾಮಿ ಮತ್ತು ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಚಂಡಿಕಾ ಹೋಮ ನ.22ರಂದು ನಡೆಯಲಿದೆ. ಬೆಳಗ್ಗೆ ನವಗ್ರಹ ಶಾಂತಿ, ರುದ್ರಾಭಿಷೇಕ ನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಶೃಂಗೇರಿಯ ರಮಾನಂದಭಟ್ಟರು ಮತ್ತು ಸಂಗಡಿಗರ ನೇತೃತ್ವದಲ್ಲಿ ಹೋಮ-ಹವನಾದಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಗಾಯಗೊಂಡಿದ್ದ ವ್ಯಕ್ತಿ ಸಾವು
ಚನ್ನಪಟ್ಟಣ: ಪಟ್ಟಣದ ಸಾತನೂರು ವೃತ್ತದ ಸಮೀಪದ ಜನತಾ ಸಾಮಿಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಸ(18) ಚಿಕಿತ್ಸೆ ವಿಫಲಗೊಂಡು ಕೊನೆಯುಸಿರೆಳೆದಿದ್ದಾರೆ. ಕೆಲಸ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದ ಆತ ಕೆಲಸ ಮುಗಿಸಿಕೊಂಡು ತನ್ನೂರಿಗೆ ಹಿಂತಿರುಗುತ್ತಿರುವಾಗ ಮಂಗಳವಾರ ಆಯತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ, ತೀವ್ರ ಗಾಯಗೊಂಡಿದ್ದ ಈತನನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

