ಬೆಂಗಳೂರು ಗ್ರಾಮಾಂತರ

'25ರಂದು ಸುವರ್ಣ ಸೌಧಕ್ಕೆ ಮುತ್ತಿಗೆ'

Published On :

ಚನ್ನಪಟ್ಟಣ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ರಾಜ್ಯ ರೈತ ಸಂಘ ನ.25ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ದಿನದಿಂದ ದಿನಕ್ಕೆ ರೈತರ ಸಮಸ್ಯೆಗಳು ತೀವ್ರಗೊಂಡಿದ್ದು ಆಳುವ ಸರ್ಕಾರಗಳು ರೈತರ ಗೋಳು ಕೇಳುತ್ತಿಲ್ಲ ಜಡ ಗೊಂಡಿರುವ ಸರ್ಕಾರಗಳನ್ನು ಎಚ್ಚರಗೊಳಿಸಲು ನಮ್ಮ ಸಂಘಟನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಿದೆ ಎಂದರು. ಕಬ್ಬು ಬೆಳೆಗಾರರ ಸಮಸ್ಯೆಗೆ ಇದುವರೆಗೆ ಪರಿಹಾರ ದೊರೆತಿಲ್ಲ, ಸರ್ಕಾರವೇ ಸಭೆ ನಡೆಸಿ ಕಬ್ಬು ಖರೀದಿಗೆ ಪ್ರತಿ ಟನ್‌ಗೆ 2500 ಎಂದು ದರ ನಿಗದಿಪಡಿಸಿದ್ದರೂ ಕಾರ್ಖಾನೆಗಳು ಇಂದಿಗೂ ಕಬ್ಬು ಅರೆಯಲು ಮುಂದಾಗಿಲ್ಲ, ಸರ್ಕಾರ ಕಾರ್ಖಾನೆಗಳ ಕಪಿಮುಷ್ಟಿಗೆ ಸಿಲುಕಿದೆ ಎಂಬ ಗುಮಾನಿ ಇದರಿಂದಾಗಿ ವ್ಯಕ್ತವಾಗಿದ್ದು ಕೂಡಲೇ ಸರ್ಕಾರ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.