ಡಿಸೆಂಬರ್ನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ
ರಾಮನಗರ: ರಾಮನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಧಾರವಾಡ ಜಿಲ್ಲೆಯ ಸಿಡಾಕ್ನ ಸಂಯುಕ್ತಾಶ್ರಯದಲ್ಲಿ ಕನಕಪುರದಲ್ಲಿ 6 ವಾರಗಳ ಕಾಗದದ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವು ಡಿಸೆಂಬರ್ನಲ್ಲಿ ನಡೆಯಲಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ತೇರ್ಗಡೆಯಾಗಿರಬೇಕು. 18ರಿಂದ 35 ವರ್ಷದೊಳಗಿರಬೇಕು. ಆಸಕ್ತರು ಸ್ವವಿವರದೊಂದಿಗೆ ಅರ್ಜಿಯನ್ನು ಜಿಲ್ಲಾ ಉಪ ನಿರ್ದೇಶಕರು(ತ), ಸಿಡಾಕ್, ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿ, ಮುಸ್ಲಿಂ ಬ್ಲಾಕ್, ಕನಕಪುರ ಇಲ್ಲಿಗೆ ನ.30ರೊಳಗೆ ಸಲ್ಲಿಸಬೇಕು. ವಿವರಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರನ್ನು ಖುದ್ದಾಗಿ ಅಥವಾ ಮೊ. 98443 46777 ಸಂಪರ್ಕಿಸಬಹುದು.
25ರಂದು ಸಾರ್ವಜನಿಕರಿಂದ ದೂರು ಸ್ವೀಕಾರ
ರಾಮನಗರ: ರಾಮನಗರದ ಲೋಕಾಯುಕ್ತ ಡಿವೈಎಸ್ಪಿ ನ.25ರಂದು ಚನ್ನಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕರಿಂದ ದೂರು ಸ್ವೀಕರಿಸುವರು. ಚನ್ನಪಟ್ಟಣ ತಾಲೂಕಿನ ಯಾವುದೇ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣ ಕೇಳಿದ್ದಲ್ಲಿ ಅಥವಾ ಉದ್ದೇಶಪೂರ್ವಕ ವಿಳಂಬ ಮಾಡಿದ್ದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲಾಡಳಿತದಿಂದ ನಾಳೆ ಕಾರ್ಯಾಗಾರ
ರಾಮನಗರ: ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನ.23ರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ, ಸಾಮರ್ಥ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್ ಉದ್ಘಾಟಿಸುವರು. ತಂಬಾಕು ನಿಯಂತ್ರಣ ಕಾನೂನು ಕುರಿತು ರಾಜ್ಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರ ಡಾ. ಜಗನ್ನಾಥ್ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ರಘುನಾಥ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ವೆಂಕಟಾಚಲಮೂರ್ತಿ, ಎಸ್.ಪಿ. ಅನುಪಮ್ ಅಗ್ರವಾಲ್, ಸಿಇಒ ಡಾ. ಎಂ.ವಿ. ವೆಂಕಟೇಶ್ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

