ಬೆಂಗಳೂರು ಗ್ರಾಮಾಂತರ

ನಾಳೆ ಸಾಹಿತ್ಯದಲ್ಲಿ ವೈಚಾರಿಕತೆ ತಿರುಳು

Published On :

ನೆಲಮಂಗಲ: ತಾಲೂಕಿನ ಭೈರನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.23ರಂದು ಬೆಳಗ್ಗೆ 9 ಗಂಟೆಗೆ ಶಾಲೆಯಿಂದ ಶಾಲೆಗೆ ಕನ್ನಡ ಸಾಹಿತ್ಯದಲ್ಲಿ ವೈಚಾರಿಕತೆ ತಿಂಗಳ ತಿರುಳು ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಭೈರನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ. ಶಶಿಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್. ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ವೇಣುಗೋಪಾಲ್, ಗ್ರಾಪಂ ಮಾಜಿ ಅಧ್ಯಕ್ಷ ರಾಜಣ್ಣ, ಅಧ್ಯಕ್ಷೆ ರೂಪ ಸಿದ್ದರಾಜು, ಮಾಜಿ ಸದಸ್ಯರಾದ ಗಂಗಹನುಮಯ್ಯ, ಚಿಕ್ಕನರಸಯ್ಯ, ನಟೇಶ್, ಭೈರನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು, ಮಾಜಿ ಅಧ್ಯಕ್ಷ ಗಂಗಯ್ಯ, ನಿವೃತ್ತ ಶಿಕ್ಷಕ ವೆಂಕಟರಮಣಯ್ಯ, ಕರ್ನಾಟಕ ಸಂರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಕೆಂಪರಾಜು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.