ಬೆಂಗಳೂರು ಗ್ರಾಮಾಂತರ

ಪ್ರಾಯೋಗಿಕ ತರಬೇತಿ ಕಾರ್ಯಾಗಾರ

Published On :

ಕ.ಪ್ರ.ವಾರ್ತೆ ಮಾಗಡಿ ನ.19
ದೈಹಿಕ ಶಿಕ್ಷಣ ಶಿಕ್ಷಕರು ಸಹ ಸ್ಪರ್ಧಾತ್ಮಕ ಪರೀಕ್ಷೆ ಬರೆದು ತಮ್ಮ ದೈಹಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಕೆ. ಧನಂಜಯ ತಿಳಿಸಿದರು.
ಮಾಗಡಿ ಪಟ್ಟಣದ ತಿರುಮಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಅಮೆಚ್ಯೂರು ಖೋ ಖೋ ಅಸೋಶಿಯೇಶನ್ ಏರ್ಪಡಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ಖೋ ಖೋ ರೆಫ್ರೀ ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕಾದರೆ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅನಿವಾರ್ಯವಾಗಿದೆ ಎಂದು ಸಂಘದ ಸೇವಾ ಮನೋಭಾವವನ್ನು ಧನಂಜಯ ಶ್ಲಾಘಿಸಿದರು.
ಅಮೆಚ್ಯೂರು ಖೋ ಖೋ ಅಸೋಷಿಯೇಷನ್ ಕಾರ್ಯದರ್ಶಿ ಚಿನ್ನಮೂರ್ತಿ ಮಾತನಾಡಿ, ದೈಹಿಕ ಶಿಕ್ಷಕರಲ್ಲಿ ಖೋ ಖೋ ಆಟದ ಕೌಶಲ್ಯ, ನಿಯಮ ಪಾಲನೆ ತಿಳಿಸುವ ಉದ್ದೇಶವಾಗಿದೆ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ಪರಿಸರ ಜಾಗೃತಿ, ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಕರ್ನಾಟಕ ದರ್ಶನ ಬೈಕ್ ರ್ಯಾಲಿ ನಡೆಸುವ ಉದ್ದೇಶ ಹೊಂದಿದ್ದೇವೆ ಎಂದರು.
ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು 43 ದೈಹಿಕ ಶಿಕ್ಷಣ ಶಿಕ್ಷಕರು ಖೋ ಖೋ ರೆಫ್ರೀ ಪರೀಕ್ಷೆ ಬರೆದು ಪ್ರಾಯೋಗಿಕವಾಗಿ ಖೋ ಖೋ ಆಟದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಬಿಇಒ ರಂಗಸ್ವಾಮಿ ಪರೀಕ್ಷಾ ಉಸ್ತವಾರಿ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಗರಾಜಪ್ಪ, ಅಮೆಚ್ಯೂರು ಖೋ ಖೋ ಅಸೋಷಿಯೇಷನ್ ಖಜಾಂಚಿ ಸುಧೀಂದ್ರ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ. ವೆಂಕಟೇಶ್, ಕಾರ್ಯದರ್ಶಿ ಆರ್.ಬಿ. ಅರಸನಾಳ್, ಅಮೆಚ್ಯೂರು ಅಸೋಷಿಯೇಷನ್ ಜಿಲ್ಲಾ ಉಪಾಧ್ಯಕ್ಷ ಸಿ.ಬಿ. ಅಶೋಕ್, ಖಜಾಂಚಿ ಯಶೋಧ, ಶ್ರೀರಂಗ ಸೇವಾ ಟ್ರಸ್ಟ್ ಕಾರ್ಯದರ್ಶಿ ಟಿ.ಎಸ್. ಪ್ರಭು, ನಾರಾಯಣಸ್ವಾಮಿ, ರಾಜೀವ್ ಗೌಡ, ದಯಾನಂದ್, ಹನುಮಂತಪ್ಪ, ರಾಜಣ್ಣ ಇತರರು ಭಾಗವಹಿಸಿದ್ದರು.

ಇಂದು ಕಸಾಪದಿಂದ ದತ್ತಿ ಕಾರ್ಯಕ್ರಮ
ರಾಮನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ 2013-14ನೇ ಸಾಲಿನ ದತ್ತಿ ಕಾರ್ಯಕ್ರಮವು ನ.22ರ ಮಧ್ಯಾಹ್ನ 2.30ಕ್ಕೆ ಬಿಡದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಇಂದಿರಮ್ಮ-ಬೋರಯ್ಯ ದತ್ತಿಯನ್ನು ಬಿಡದಿಯ ಸಿ. ಬೋರಯ್ಯ ಅವರು ಪ್ರಾಯೋಜಿಸಿದ್ದಾರೆ. ಕಾರ್ಯಕ್ರಮವನ್ನು ಜಿ.ಪಂ.ನ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಲ್.ಚಂದ್ರ ಉದ್ಘಾಟಿಸುವರು. ಶಾಲೆಯ ಮುಖ್ಯ ಶಿಕ್ಷಕ ಆರ್. ಸುರೇಶ್ ನಾಯ್ಕ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ನಾಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಜೆ. ಬಾಲಗಂಗಾಧರ ಪ್ರತಿಭಾ ಪುರಸ್ಕಾರ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.