ಬೆಂಗಳೂರು ಗ್ರಾಮಾಂತರ

ದತ್ತಿ ಕಾರ್ಯಕ್ರಮ

Published On :

ರಾಮನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 2013-14ನೇ ಸಾಲಿನ ದತ್ತಿ ಕಾರ್ಯಕ್ರಮವು ನ.23ರ ಬೆಳಗ್ಗೆ 9ಕ್ಕೆ ತಾಲೂಕಿನ ಜಾಲಮಂಗಲದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಭಿಮಾನ್ ನೇತ್ರಾವತಿ ಅಮರ ಪ್ರೇಮಿಗಳ ದತ್ತಿಯನ್ನು ಲಕ್ಷ್ಮಮ್ಮಸದಾನಂದ ಅವರು ಪ್ರಾಯೋಜಿಸಿದ್ದಾರೆ. ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ಮಂಜುಳಾ ಮರಿದೇವರು ಉದ್ಘಾಟಿಸುವರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ನಾಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಶಿಕಲಾ ಅಧ್ಯಕ್ಷತೆ ವಹಿಸುವರು. ತಾ.ಪಂ. ಸದಸ್ಯ ಸಿದ್ದಲಿಂಗೇಗೌಡ ಪ್ರತಿಭಾ ಪುರಸ್ಕಾರ ವಿತರಿಸುವರು. ಹೊನ್ನಿಗಾನಹಳ್ಳಿ ಸಿದ್ದರಾಜಯ್ಯ ಮತ್ತು ತಂಡದವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಡುವರು.

ರಕ್ತದಾನ ಶಿಬಿರ
ರಾಮನಗರ: ಆರೋಗ್ಯ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದಿಂದ ನ.25ರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ನಗರದ ಅರ್ಚಕರಹಳ್ಳಿ ಬಳಿಯ ಪಟೇಲ್ ನರ್ಸಿಂಗ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಘುನಾಥ್ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ
ರಾಮನಗರ: ಚನ್ನಪಟ್ಟಣ ನಗರ ವ್ಯಾಪ್ತಿಯಲ್ಲಿ ನ.24ರಂದು ನಿರಂತರ ಜ್ಯೋತಿ ಕಾಮಗಾರಿ ಕಾರ್ಯ ಹಮ್ಮಿಕೊಂಡಿರುವುದರಿಂದ ಸಿಪಿಟಿ-1 ಮಾರ್ಗಕ್ಕೆ ಸಂಬಂಧಿಸಿದ ಜೀವನ್‌ಪುರ, ಬಸವೇಶ್ವರನಗರ, ಕಲಾನಗರ, ಹೊನ್ನಿಗನಹಳ್ಳಿ, ಸಿಲ್ಕ್ ಫಾರಂ, ಎಲಚಿಪಾಳ್ಯ, ಕೆಂಚಯ್ಯನದೊಡ್ಡಿ ಹಾಗೂ ಎಸ್‌ಎಸ್ ಮಿಲ್ ಮಾರ್ಗಕ್ಕೆ ಸಂಬಂಧಿಸಿದ ಬೈರಾಪಟ್ಟಣ, ದೊಡ್ಡಮಳೂರು ಈ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂನ ಚನ್ನಪಟ್ಟಣ ನಗರ ಉಪ ವಿಭಾಗದ ಎಇಇ ತಿಳಿಸಿದ್ದಾರೆ.

ಶಿಲಾನ್ಯಾಸ ಕಾರ್ಯಕ್ರಮ
ರಾಮನಗರ: ರಾಜ್ಯ ಔಷಧ ನಿಯಂತ್ರಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ರಘುರಾಮ್ ಭಂಡಾರಿ ಅವರನ್ನು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ ಕೆಮಿಸ್ಟ್ ಭವನ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಸನ್ಮಾನಿಸಲಾಯಿತು. ರಾಮನಗರ ಜಿಲ್ಲಾ ಸಹಾಯಕ ಔಷಧ ನಿಯಂತ್ರಣಾಧಿಕಾರಿ ಎಂ. ಸುರೇಶ್, ಉಪ ಔಷಧ ನಿಯಂತ್ರಣಾಧಿಕಾರಿ ಎಚ್. ಶ್ರೀನಿವಾಸ್, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕೆ. ಕೃಷ್ಣ, ಕಾರ್ಯದರ್ಶಿ ಎಚ್. ಮಂಜುನಾಥ್, ಖಜಾಂಚಿ ಆರ್.ಕೆ. ಅತೀಕ್, ಚನ್ನಪಟ್ಟಣ, ಮಾಗಡಿ ಹಾಗೂ ಬಿಡದಿಯ ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.