ನರ್ಸಿಂಗ್ ಕಾಲೇಜಿಗೆ ಶೇ.100 ಫಲಿತಾಂಶ
ರಾಮನಗರ: ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿಯು 2013-14ನೇ ಸಾಲಿನಲ್ಲಿ ನಡೆಸಿದ ಜಿಎನ್ಎಂ ಪರೀಕ್ಷೆಯಲ್ಲಿ ನಗರದ ಎಂ.ಎಚ್. ನರ್ಸಿಂಗ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ಉನ್ನತ ದರ್ಜೆ ಹಾಗೂ ಉಳಿದವರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.
ಡಿ.1ರಂದು ಜನಸಂಪರ್ಕ ಸಭೆ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಡಿ.1ರಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರದ ಯಾವುದೇ ಇಲಾಖೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರನ್ನು ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ. ಅಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಿರುತ್ತಾರೆ.
ಆರೋಗ್ಯ ತಪಾಸಣೆ
ನೆಲಮಂಗಲ: ಪಟ್ಟಣದ ಸುಭಾಷ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನ.23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ದಿ. ನಂದಕುಮಾರ್ ಅವರ ಸ್ಮರಣಾರ್ಥ ಬಿಜಿಎಸ್ ಗ್ಲೋಬಲ್ ಹಾಸ್ಪಿಟಲ್ಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ರಕ್ತದೊತ್ತಡ, ರಕ್ತ ಸಕ್ಕರೆ, ಇಸಿಜಿ ಹಾಗೂ ತಜ್ಞ ವೈದ್ಯರ ಸಲಹೆ ಶಿಬಿರದಲ್ಲಿ ದೊರೆಯುವ ಸೌಲಭ್ಯಗಳು. ವಿವರಗಳಿಗೆ ಮೊ. 99642 32857, 98453 39551 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

