ಬೆಂಗಳೂರು ಗ್ರಾಮಾಂತರ

ಪ್ರೌಢಶಾಲೆ ರಂಗಮಂದಿರಕ್ಕೆ ರು. 5 ಲಕ್ಷ

Published On :

ದೇವನಹಳ್ಳಿ: ತಾಲೂಕು ಬೆಟ್ಟಕೋಟೆ ರಾಮಕೃಷ್ಣ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಅಂಗವಾಗಿ ಹಿರಿಯ ಶಿಕ್ಷಕರಿಗೆ ಸನ್ಮಾನ ಅಲ್ಲದೆ ಅಂತರ ಪ್ರೌಢಶಾಲಾ ಕನ್ನಡ ಚರ್ಚಾಸ್ಪರ್ಧೆ ಮತ್ತು ಜಾನಪದ ಗೀತೆ ಸ್ಪರ್ಧೆ ಆಯೋಜಿಸಲಾಗಿತ್ತು.
ಶಾಸಕ ಪಿಳ್ಳಮುನಿಶಾಮಪ್ಪ ಕಾರ್ಯಕ್ರಮ ಉದ್ಘಾಟಿಸಿ ಶಾಲೆಯ ಹಿರಿಯ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಇಂತಹ ಮಾದರಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇತರ ಶಾಲೆಗಳಿಗೆ ಮಾದರಿಯಾಗಿದೆ. ಇಲ್ಲಿನ ಹಳೆಯ ವಿದ್ಯಾರ್ಥಿಗಳು ತಾವು ಯಾವುದೇ ವೃತ್ತಿ ಕೈಗೊಂಡಿರಲಿ, ತಮ್ಮ ಶಾಲೆಯನ್ನು ನೆನಪಿನಲ್ಲಿಟ್ಟಿರುವುದು ಅಭಿನಂದನೀಯ ಎಂದರು.
್ತಕನ್ನಡ ನಾಡು ನುಡಿ ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸುವ ಕಾರ್ಯ ಆಗಬೇಕು ಎಂದ ಶಾಸಕರು ಶಾಲಾ ಮುಖ್ಯ ಶಿಕ್ಷಕರ ಮನವಿ ಮೇರೆಗೆ ರಂಗ ಮಂದಿರ ನಿರ್ಮಾಣಕ್ಕಾಗಿ ತಮ್ಮ ನಿಧಿಯಿಂದ ಐದು ಲಕ್ಷ ರು ನೀಡುವುದಾಗಿ ತಿಳಿಸಿದರು.
ಜಿಪಂ ಸದಸ್ಯ ಬಿ.ರಾಜಣ್ಣ ಮಾತನಾಡಿ ಇಲ್ಲಿನ ಶಾಲೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮಾಡಿದ ಶಾಲೆ ಮತ್ತು ಗುರುಗಳಿಗೆ ಗೌರವ ತರುವ ಕೆಲಸ ಮಾಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಜಿ.ಎ.ಚಂದ್ರಶೇಖರ್, ರಾಜ್ಯ ಪ್ರಶಸ್ತಿ ಪುರಸ್ಕೃತ ಅಶ್ವತ್ಥನಾರಾಯಣಸ್ವಾಮಿ, ಯಾ.ಚಿ.ದೊಡ್ಡಯ್ಯ, ಗೋಪಾಲಕೃಷ್ಣ, ಟಿ.ಕೆ.ಲಿಂಗಪ್ಪ, ಪ್ರಕಾಶ್ ಇವರನ್ನು ಸನ್ಮಾನಿಸಲಾಯಿತು.
 ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಎಂ.ಎಸ್.ನಾರಾಯಣಪ್ಪ ಅಧ್ಯಕ್ಷತೆ ವಹಿಸಿದ್ದರು. ಎ.ಸಿ.ಗುರುಸ್ವಾಮಿ,  ಸಾಹಿತಿ ಹಾಗೂ ಉಪನ್ಯಾಸಕ ಮುಕುಂದ, ಕಾರ್ಯದರ್ಶಿ ಎಂ.ಚನ್ನರಾಯಪ್ಪ, ಗ್ರಾಮ ಪಂ.ಅಧ್ಯಕ್ಷೆ ಆಂಜಿನಮ್ಮ, ಜಿ.ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು. ದೇವನಹಳ್ಳಿ ತಾಲೂಕಿನ 26 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಜಾನಪದ ಮತ್ತು ಚರ್ಚಾಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ದೈಹಿಕ ಶಿಕ್ಷಕ ಅಶ್ವತ್ಥನಾರಾಯಣಸ್ವಾಮಿ ತಿಳಿಸಿದರು. ಇದೇ ಸಂಧರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.