ಬೆಂಗಳೂರು ಗ್ರಾಮಾಂತರ

ಗ್ಯಾಂಗ್‌ರೇಪ್; ಇನ್ನೂ ನಾಲ್ವರ ಸೆರೆ

Published On :

ದೊಡ್ಡಬಳ್ಳಾಪುರ: ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಪ್ರಕರಣದ ಎಲ್ಲ 6 ಆರೋಪಿಗಳೂ ಜೈಲು ಸೇರಿದಂತಾಗಿದೆ.
ಪ್ರಾಥಮಿಕ ಮಾಹಿತಿ ಆಧರಿಸಿ 6 ಮಂದಿಯ ವಿಚಾರಣೆ ನಡೆಸಿದ್ದ ಪೊಲೀಸರು ಇಬ್ಬರ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಉಳಿದ ನಾಲ್ವರನ್ನು ಬಿಡುಗಡೆ ಮಾಡಿದ್ದರು. ಪೊಲೀಸರು ಈ ನಡೆ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದಲ್ಲಿ ರಾಜಕಾರಣಿಯೊಬ್ಬರ ವಾಹನ ಚಾಲಕ ಮತ್ತು ಪೊಲೀಸರೊಬ್ಬರ ಸಂಬಂಧಿ ಕೂಡ ಭಾಗಿಗಳಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆಗಳನ್ನೂ ಸಹ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಒತ್ತಡ ಹೆಚ್ಚಾಗಿತ್ತು. ಹಾಗಾಗಿ ಪೊಲೀಸರು ಉಳಿದ ನಾಲ್ವರು ಆರೋಪಿಗಳನ್ನೂ ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಡಿವೈಎಸ್ಪಿ ಶ್ರೀಧರ್, ಅತ್ಯಾಚಾರಕ್ಕೊಳಗಾದ ಬಾಲಕಿ ಕೊಟ್ಟ ಪ್ರಾಥಮಿಕ ಮಾಹಿತಿ ಆಧರಿಸಿ ವಿನಯಕುಮಾರ್ ಮತ್ತು ರಾಜು ಎಂಬ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಮುಂದುವರೆದ ತನಿಖೆಯಲ್ಲಿ ಮಾರುತಿ, ರಮೇಶ್, ಲೋಕೇಶ್ ಮತ್ತು ಸಂತೋಷ್ ಎಂಬುವವರೂ ಆರೋಪಿಗಳಾಗಿ ಕಂಡುಬಂದಿರುವುದರಿಂದ ಈ ನಾಲ್ವರ ವಿರುದ್ಧವೂ ದೂರು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.