ಬೆಂಗಳೂರು ಗ್ರಾಮಾಂತರ

ಲಯನ್ಸ್ ವತಿಯಿಂದ ಆಯುರ್ವೇದ ಶಿಬಿರ

Published On :

ದೊಡ್ಡಬಳ್ಳಾಪುರ: ಇಲ್ಲಿನ ಲಯನ್ಸ್ ಕ್ಲಬ್, ದೊಡ್ಡಬಳ್ಳಾಪುರ ಲಯನ್ಸ್ ಚಾರಿಟೀಸ್ ಟ್ರಸ್ಟ್ ಮತ್ತು ಲಯನೆಸ್ ಕ್ಲಬ್‌ಗಳು ಹಾಗೂ ಸರ್ಕಾರಿ ಆಯುರ್ವೇದ ಆಸ್ಪತ್ರೆ ಸಹಯೋಗದಲ್ಲಿ 14ನೇ ಉಚಿತ ಆಯುರ್ವೇದ ಮತ್ತು ಹೋಮಿಯೋಪತಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಲಯನ್ಸ್ ಭವನದಲ್ಲಿ ನಡೆಯಿತು.
ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯಕ್ರಮ ರೂಪಿಸಲಾಗಿತ್ತು. ಡಾ. ರಾಮಲಿಂಗಯ್ಯ ಮತ್ತು ಸರ್ಕಾರಿ ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಮುರಳೀಕೃಷ್ಣ ನೇತೃತ್ವದ ವೈದ್ಯರ ತಂಡ ರೋಗಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಆರ್.ವಿ. ಶಿವಣ್ಣ ಅಧ್ಯಕ್ಷತೆ ವಹಿಸಿದ್ದ ಶಿಬಿರದಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ವಿಚಾರ ಸಂಕಿರಣ ನಡೆಯಿತು. ಪರಿಸರವಾದಿ ಕೆ. ಗುರುದೇವ್ ನೀರು ಮತ್ತು ನೈರ್ಮಲ್ಯದ ಮಹತ್ವ ಮತ್ತು ಅನಿವಾರ್ಯತೆಯ ಕುರಿತು ಪ್ರಾತ್ಯಕ್ಷಿಕೆ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ನಡೆದ ಪಾಪ್‌ಸ್ಮಿಯರ್ ಕ್ಯಾಂಪ್‌ನಲ್ಲಿ ಡಾ.ಶ್ಯಾಂಪ್ರಸಾದ್, ಡಾ. ಇಂದಿರಾ ಶ್ಯಾಂಪ್ರಸಾದ್, ಡಾ. ತೇಜಸ್ವಿನಿ, ಕಾಮೇಶ್ವರಿದೇವಿ ಭಾಗವಹಿಸಿದ್ದರು. ರಘು ಏಜೆನ್ಸೀಸ್ ಶಿಬಿರವನ್ನು ಪ್ರಾಯೋಜಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.