ಹೊಸಕೋಟೆ; ಕೆ.ಆರ್. ರಸ್ತೆಯಲ್ಲಿ ಸಂಚಾರ ದಟ್ಟಣೆ
ಹೊಸಕೋಟೆ: ಪಟ್ಟಣದ ಸಂಪರ್ಕ ರಸ್ತೆಯಾದ ಕೆ.ಆರ್. ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ದಿನೇ ದಿನೆ ಹೆಚ್ಚಾಗುತ್ತಿದ್ದು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಿಂದ ಪಟ್ಟಣದ ಬಸ್ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ಏಕೈಕ ಮುಖ್ಯರಸ್ತೆ ಇದಾಗಿದೆ. ಬಿಎಂಟಿಸಿ ವಾಹನಗಳು ಸೇರಿದಂತೆ ಇತರೆ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ.
ಈ ರಸ್ತೆಯಲ್ಲಿ ಸುಮಾರು 10 ವಾಣಿಜ್ಯ ಬ್ಯಾಂಕ್ಗಳಿದ್ದು, ಬ್ಯಾಂಕ್ಗೆ ಬರುವ ಗ್ರಾಹಕರಿಗೆ ಸಮರ್ಪಕ ವಾಹನ ನಿಲುಗಡೆ ಸ್ಥಳಾವಕಾಶ ಕೊರತೆಯಿಂದಾಗಿ ರಸ್ತೆಯಲ್ಲಿಯೇ ವಾಹನಗಳನ್ನು ನಿಲ್ಲಿಸುತ್ತಾರೆ. ಬಹಳಷ್ಟು ಕಡೆ ಆಟೋಗಳನ್ನು ರಸ್ತೆಯ ತಿರುವಿನಲ್ಲಿಯೇ ನಿಲುಗಡೆ ಮಾಡುತ್ತಿರುವುದು ಮತ್ತಷ್ಟು ಸಮಸ್ಯೆ ಸೃಷ್ಟಿಸಿದೆ.
ಸುಗಮ ಸಂಚಾರಕ್ಕೆಂದು ಮರ ಕಡಿದರು: ವರ್ಷದ ಹಿಂದೆ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಪುರಸಭೆ ವತಿಯಿಂದ ರಸ್ತೆಯ ಎರಡೂ ಬದಿಯಲ್ಲಿದ್ದ ಹಳೆಯ ಮರಗಳನ್ನು ಕಡಿದು ಹಾಕಲಾಗಿತ್ತು. ಆದರೆ, ತೆರವಾದ ಜಾಗದಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ನಿರ್ಮಾಣ ಮಾಡಿರುವುದರಿಂದ ಉದ್ದೇಶ ಈಡೇರಿಲ್ಲ.
ಒತ್ತಾಯ: ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಪರಿಹರಿಸಲು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸ್ ನಿಲ್ದಾಣ ನಿರ್ಮಾಣಕ್ಕೆ ಒತ್ತಾಯ: ಪಟ್ಟಣದಲ್ಲಿ ಸಮರ್ಪಕ ಬಸ್ ನಿಲ್ದಾಣ ಕೂಡ ಇಲ್ಲದ ಕಾರಣ ಬೆಂಗಳೂರಿನಿಂದ ತಾಲೂಕಿನ ಬಹುತೇಕ ಗ್ರಾಮಗಳಿಗೆ ಸಂಚರಿಸುವ ಬಸ್ಗಳು ಪಟ್ಟಣದ ಒಳಗಡೆ ಬಾರದೆ ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಲುಗಡೆ ಮಾಡುತ್ತಿವೆ. ಇದರಿಂದ ಪಟ್ಟಣಕ್ಕೆ ತೆರಳುವ ಜನ, ತಾಲೂಕು ಕಚೇರಿಗೆ ಬರುವ ರೈತರು, ಪರದಾಡುವಂತಾಗಿದೆ.
ಶಾಸಕರಿಗೆ ಮನವಿ: ಈಗಲಾದರೂ ಇತ್ತ ಗಮನ ಹರಿಸಿ ಪಟ್ಟಣದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣ ನಿರ್ಮಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದು ಡಾ. ಬಾಬು ಜಗಜೀವನರಾಮ್ ಹೋರಾಟ ವೇದಿಕೆಯ ಜಿಲ್ಲಾಧ್ಯಕ್ಷ ಎನ್. ಕುಮಾರ್ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

