ಬೆಂಗಳೂರು ಗ್ರಾಮಾಂತರ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published On :

ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2013-14ನೇ ಸಾಲಿನಲ್ಲಿ 18 ರಿಂದ 45 ವಯೋವುತಿ ಒಳಗಿನ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗೆ ಹಾಗೂ ಸಂಸ್ಥೆಗಳಿಗೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಮತ್ತು ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ ಅರ್ಹ ಸಂಸ್ಥೆಗಳು ಹಾಗೂ ಮಹಿಳೆಯರು ಡಿ.5ರೊಳಗೆ ಅರ್ಜಿ ಹಾಗೂ ನಿಗದಿತ ದಾಖಲಾತಿಗಳನ್ನು ದ್ವಿಪ್ರತಿಗಳಲ್ಲಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.  ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ಹಿಂದಿನ ವರ್ಷದ ಜನವರಿ 1ರಿಂದ ಡಿಸೆಂಬರ್ 30ರೊಳಗೆ ವಿಶೇಷ ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು. ತನ್ನ ಜೀವನದ ಹಂಗು ತೊರೆದು ಆಪತ್ಕಾಲದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡಿರಬೇಕು. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ದೂ.080-27273036, 27272741 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.