ಬೆಂಗಳೂರು ಗ್ರಾಮಾಂತರ

ಬರಪೀಡಿತ ಪ್ರದೇಶದ ಪಟ್ಟಿಯಿಂದ ಚನ್ನಪಟ್ಟಣ ಕೈಬಿಟ್ಟಿದ್ದಕ್ಕೆ ಆಕ್ರೋಶ, ಪ್ರತಿಭಟನೆ

Published On :

ಚನ್ನಪಟ್ಟಣ: ಬರಪೀಡಿತ ಪ್ರದೇಶದ ಪಟ್ಟಿಯಿಂದ ಬೊಂಬೆನಗರಿಯನ್ನು ಕೈ ಬಿಟ್ಟಿರುವ ಸರ್ಕಾರದ ಕ್ರಮದ ವಿರುದ್ಧ ತಾಲೂಕಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಶನಿವಾರ ಸರ್ಕಾರದ ನಿಲುವಿನ ವಿರುದ್ಧ ತಾಲೂಕು ಬಿಜೆಪಿ ವತಿಯಿಂದ  ತಹಸೀಲ್ದಾರ್ ಕಚೇರಿ ಮುಂಭಾಗ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ತಾಲೂಕು ಬಿಜೆಪಿ ಮುಖಂಡ ರವಿಕುಮಾರ್ ಗೌಡ ನೇತೃತ್ವದಲ್ಲಿ ಧರಣಿ ನಡೆಸಿದ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ತಮ್ಮ ಪಕ್ಷದ ಶಾಸಕರು ಇಲ್ಲಿ ಚುನಾಯಿತರಾಗಿಲ್ಲ ಎಂಬ ಕಾರಣಕ್ಕೆ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಇಂತಹ ದ್ವೇಷದ ರಾಜಕಾರಣ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ತಾಲೂಕಿನ ಜೀವಾಳ ವೆನಿಸಿದ ಕಣ್ವ ಜಲಾಶಯ ತುಂಬಿ 17 ವರ್ಷಗಳು ಕಳೆದಿವೆ. ತಾಲೂಕಿನ ಯಾವುದೇ ಕೆರೆಗಳು ತುಂಬಿಲ್ಲ, ಕಣ್ವ ಬಯಲಿನ ಅಚ್ಚುಕಟ್ಟುದಾರರು ಬೆಳೆ ಬೆಳೆದು ಹತ್ತಾರು ವರ್ಷಗಳೇ ಕಳೆದಿವೆ. ಇನ್ನು ಮಳೆಯಾಶ್ರಿತ ಜಮೀನುಗಳಲ್ಲಿ ಬೆಳೆ ಬೆಳೆಯುವುದನ್ನೇ ರೈತರು ಮರೆತು ಬಿಟ್ಟಿದ್ದಾರೆ. ತಾಲೂಕು ಇಂತಹ ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಸರ್ಕಾರ ಅರಿವುಗೇಡಿಯಂತೆ ವರ್ತಿಸಿರುವುದು ಅಕ್ಷ್ಯಮ್ಮ ಎಂದು ಕಿಡಿಕಾರಿದರು. ಇಂದು ನಮ್ಮ ಪಕ್ಷ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದು ಕೂಡಲೇ ಸರ್ಕಾರ ಎಚ್ಚೆತ್ತು ಕೊಂಡು  ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಗೆ ಸೇರಿಸದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.