ಬೆಂಗಳೂರು ಗ್ರಾಮಾಂತರ

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಿಕೊಡಿ

Published On :

ದೊಡ್ಡಬಳ್ಳಾಪುರ: ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಕೂಡಲೇ ಸ್ವಂತ ಕಟ್ಟಡಗಳನ್ನು ನಿರ್ಮಿಸಿಕೊಂಡುವಂತೆ ಒತ್ತಾಯಿಸಿ ಇಲ್ಲಿನ ತಾಲೂಕು ಕನ್ನಡ ಕ್ರಾಂತಿ ದೀಪ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಗರ ವ್ಯಾಪ್ತಿಯಲ್ಲಿ 44 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 2 ಕೇಂದ್ರಗಳು ಮಾತ್ರ ಸ್ವಂತ ಕಟ್ಟಡ ಹೊಂದಿದೆ. 19 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. 21 ಕೇಂದ್ರಗಳು ವಿವಿಧ ಇಲಾಖೆಗಳ ಸರ್ಕಾರಿ ಕಟ್ಟಡಗಳು ಸೇರಿದಂತೆ ಸಮುದಾಯ ಭವನಗಳಲ್ಲಿ ನಡೆಯುತ್ತಿವೆ. ಈ ಕಟ್ಟಡಗಳಲ್ಲಿ ಸ್ಥಳಾವಕಾಶ ಮತ್ತು ಸವಲತ್ತುಗಳ ಕೊರತೆ ಎದ್ದು ಕಾಣುತ್ತಿದೆ. ಮಕ್ಕಳ ಸಂಖ್ಯೆಗೆ ಪೂರಕವಾಗಿ ಸ್ಥಳಾವಕಾಶ ಲಭ್ಯವಿಲ್ಲ ಎಂದು ಆರೋಪಿಸಿದರು.
ಮಕ್ಕಳಿಗೆ ಪಾಠ-ಪ್ರವಚನಗಳು ನಡೆಯುವ ಸ್ಥಳದಲ್ಲೇ ಅಡುಗೆ ಕೂಡ ಸಿದ್ಧಪಡಿಸಬೇಕಾದ ಅನಿವಾರ್ಯತೆ ಇದೆ. ಅಡುಗೆ ಮನೆ ಮತ್ತು ಪ್ರವಚನ ಕೊಠಡಿಗಳು ಒಂದೇ ಆಗಿರುವುದರಿಂದ ಮಕ್ಕಳಿಗೆ ನಿರೀಕ್ಷಿತ ಮಟ್ಟದಲ್ಲಿ ಬೋಧನೆ ಮತ್ತು ಇತರ ಚಟುವಟಿಕೆಗಳು ನಡೆಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ನಿರ್ಮಿಸಿಕೊಡಲು ಸರ್ಕಾರದ ಮೂಲಕ ಅನುಮೋದನೆ ಪಡೆದು ಕಟ್ಟಡ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಕ್ರಾಂತಿ ದೀಪ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ್, ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಗೌರಮ್ಮ, ಸಂತೋಷ್, ಶ್ರೀನಿವಾಸ್, ಚಂದ್ರಶೇಖರ್, ಚನ್ನಿಗರಾಮಯ್ಯ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.