ಶಿಕ್ಷಣದ ಹಕ್ಕಿನ ಕುರಿತು ಅರಿವು ಕಾರ್ಯಕ್ರಮ
ಮಾಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ಮಕ್ಕಳ ಕಡ್ಡಾಯ ಶಿಕ್ಷಣದ ಹಕ್ಕಿನ ಕುರಿತು ಅರಿವು ಕಾರ್ಯಕ್ರಮವನ್ನು ನ.25 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಕಲ್ಯಾಗೇಟ್ ಸರ್ಕಾರಿ ಬಾಲಕಿಯರ ಫ್ರೌಡಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಾಯಕ ಸರ್ಕಾರಿ ಅಭಿಯೋಜಕಿ ಕೆ.ಎಸ್. ಲತಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಶಿಕ್ಷಕಿ ಪಿ.ಶೈಲಾ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ವಕೀಲರ ಸಂಘದ ಅಧ್ಯಕ್ಷ ಜಿ.ಪಾಪಣ್ಣ, ಉಪಾಧ್ಯಕ್ಷ ಆರ್.ರಂಗಯ್ಯ, ಕಾರ್ಯದರ್ಶಿ ಮುನಿಸ್ವಾಮಿ ನಾಯಕ್ ಇತರರು ಭಾಗವಹಿಸಲಿದ್ದಾರೆ. ವಕೀಲ ನಟರಾಜ್ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕಿನ ಕುರಿತು, ಶಿಕ್ಷಕಿ ಪದ್ಮ ಮಕ್ಕಳಿಗೆ ಶಿಕ್ಷಣದ ಬಗ್ಗೆ ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ನ.26 ರಂದು ನ್ಯಾಯಾಲಯದ ಆವರಣದಲ್ಲಿ ಕಾನೂನು ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಿರಿಯ ಸಿ.ಜೆ. ನ್ಯಾಯಾಧೀಶೆ ನಾಗಶ್ರೀ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಲೂಕು ವಕೀಲರ ಸಂಘದ ಅಧ್ಯಕ್ಷ ಜಿ.ಪಾಪಣ್ಣ ಅಧ್ಯಕ್ಷತೆ ವಹಿಸಲಿದ್ದು, ಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಸ್. ಶ್ಯಾಮಲಾ, ಅಪರ ಸಿವಿಲ್ ನ್ಯಾಯಾಧೀಶೆ ಮಾಲಾ ಎನ್. ಡಿ., ಸಹಾಯಕ ಸರ್ಕಾರಿ ಅಭಿಯೋಜಕಿ ಕೆ.ಎಸ್. ಲತಾ, ಇತರರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

