10 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಸೂಲಿಬೆಲೆ: ಪಟ್ಟಣದ ಸುಗ್ಗಲಮ್ಮ ದೇವಿ ಬೀದಿಯ ನಾನಾ ಕಡೆ ನಡೆಯಲಿರುವ ಸುಮಾರು 10 ಲಕ್ಷ ರು. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಾಸಕ ಎನ್. ನಾಗರಾಜ್ ಗುದ್ದಲಿ ಪೂಜೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಪ್ರಯತ್ನ ಮಾಡಲಾಗುತ್ತಿದೆ. ಗ್ರಾಮದಲ್ಲಿ ಕುಡಿಯುವ ನೀರು ಸಮಸ್ಯೆಯನ್ನು ಪರಿಹರಿಸಲು ಶಾಸಕನಾದ 6 ತಿಂಗಳಲ್ಲಿಯೇ 6 ಕೊಳವೆ ಬಾವಿಗಳನ್ನು ಕೊರೆಸಿದ್ದು, ಒಂದರಲ್ಲಿ ಮಾತ್ರ ನೀರು ಸಿಕ್ಕಿದ್ದು, ಇನ್ನುಳಿದ ಎಲ್ಲ ಕೊಳವೆ ಬಾವಿಗಳು ವಿಫಲವಾಗಿವೆ. ನರೇಗ ಯೋಜನೆಯಲ್ಲಿ ಚರಂಡಿ ಕಾಮಗಾರಿಗಳು ನಡೆಯುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರದೇಶ ಅಭಿವೃದ್ಧಿಗೆ ಸಿಕ್ಕಿರುವ ಅನುದಾನದಲ್ಲಿ ಎಸ್ಟಿ ಕಾಲೊನಿಯ ಪ್ರದೇಶದ ರಸ್ತೆಗಳನ್ನು ರು.10 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಗುಣಮಟ್ಟ ಕಾಮಗಾರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪ್ರಸಾದ್, ಹೋಬಳಿ ಮುಖಂಡ ಕೃಷ್ಣಪ್ಪ, ಹಿರಿಯ ಮುಖಂಡ ಮುನಿಶಾಮಣ್ಣ, ಯರೇಗೌಡ, ಲಕ್ಷ್ಮಣ್, ರಾಘವೇಂದ್ರ, ಮುನಿರಾಜ್, ರವಿ ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

